ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಹರಿಯಾಣದಲ್ಲಿ ಗೃಹ ಸಚಿವರ ಸಮ್ಮೇಳನ

Last Updated 25 ಅಕ್ಟೋಬರ್ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 27 ಮತ್ತು 28 ರಂದು ಹರಿಯಾಣದ ಸೂರಜ್‌ಕುಂಡ್‌ನಲ್ಲಿ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ ನಡೆಯಲಿದ್ದು, ರಾಜ್ಯದಲ್ಲಿ ಅಪರಾಧಗಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ವೈಜ್ಞಾನಿಕ ಕ್ರಮಗಳು, ತನಿಖೆ ಕಾರ್ಯದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆ ವಿಷಯವನ್ನು ಅಧಿಕಾರಿಗಳು ಮಂಡಿಸಲಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಅಪರಾಧ ಚಟುವಟಿಕೆಗಳ ನಿಯಂತ್ರಣ, ಅಪರಾಧ ಪತ್ತೆ, ಸೈಬರ್‌ ಕ್ರೈಂ, ಆಧುನಿಕ ತಂತ್ರಜ್ಞಾನಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶದಲ್ಲೇ ಮೊದಲ ಬಾರಿಗೆ ಅಪರಾಧ ಸ್ಥಳ ಪರಿವೀಕ್ಷಣಾ ಅಧಿಕಾರಿಗಳ ನೇಮಕ ಮಾಡಿಕೊಂಡಿರುವುದು, ವೈಜ್ಞಾನಿಕವಾಗಿ ಸಾಕ್ಷ್ಯ ಸಂಗ್ರಹ, ಸಾಕ್ಷ್ಯ ಸಂರಕ್ಷಣೆ ಮತ್ತು ನ್ಯಾಯಾಲಯಕ್ಕೆ ಸಲ್ಲಿಕೆ ಪ್ರಕ್ರಿಯೆ ನಡೆಸಲು ವಿಶೇಷ ತರಬೇತಿ ನೀಡಿರುವುದನ್ನು ಸಮ್ಮೇಳನದಲ್ಲಿ ವಿವರಿಸಲಾಗುತ್ತದೆ.

ಈ ಸಮ್ಮೇಳನದಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ, ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್‌, ಪೊಲೀಸ್‌ ಮಹಾನಿರ್ದೇಶಕ ಮುಖ್ಯಸ್ಥ ಪ್ರವೀಣ್‌ ಸೂದ್‌ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT