ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಕಾರ್ಯದರ್ಶಿ ಅಜಯ್ ಭಲ್ಲಾಗೆ 4ನೇ ಬಾರಿ ಸೇವಾವಧಿ ವಿಸ್ತರಣೆ

Published 4 ಆಗಸ್ಟ್ 2023, 15:59 IST
Last Updated 4 ಆಗಸ್ಟ್ 2023, 15:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವಾವಧಿಯನ್ನು 2024 ಆಗಸ್ಟ್‌ 22ರ ವರೆಗೆ‌ ವಿಸ್ತರಿಸಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಅಜಯ್ ಭಲ್ಲಾ ಅವರಿಗೆ 60 ವರ್ಷ ತುಂಬಿದ್ದ ಹಿನ್ನೆಲೆಯಲ್ಲಿ ನವೆಂಬರ್‌ 2020ರಲ್ಲಿ ನಿವೃತ್ತರಾಗಬೇಕಿತ್ತು. ಆದರೆ 202‌0ರಿಂದ ಈ ವರೆಗೂ ಮೂರು ಸಲ ಸೇವಾವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ನಾಲ್ಕನೆಯ ಬಾರಿಗೆ ವಿಸ್ತರಿಸಲಾಗಿದೆ.  ಆಗಸ್ಟ್‌ 22ರ ವರೆಗೆ ‌ವಿಸ್ತರಿಸಲಾಗಿದೆ.  

ಅಜಯ್ ಭಲ್ಲಾ ಅವರು ಅಸ್ಸಾಂ-ಮೇಘಾಲಯ ಕೇಡರ್‌ನ 1984 ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, 2019ರಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT