ಹೊನ್ನಾವರ: ‘ಭಾಷಣದಲ್ಲಿ ಹಿಂಸಾಚಾರ ಪ್ರಚೋದಿಸುವ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲಿಸಬೇಕು’ ಎಂದು ಆಗ್ರಹಿಸಿ ಬಿಜೆಪಿ ಮಂಕಿ ಮಂಡಲದ ವತಿಯಿಂದ ಶನಿವಾರ ಮಂಕಿ ಪೊಲೀಸ್ ಠಾಣೆಯ ಪಿಎಸ್ಐ ಅವರಿಗೆ ಮನವಿ ಸಲ್ಲಿಸಲಾಯಿತು.

‘ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂನಲ್ಲಿ ಭಾಷಣ ಮಾಡುವ ವೇಳೆ ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಜೊತೆಗೆ ಹಿಂಸೆಗೆ ಪ್ರಚೋದನೆ ನೀಡಿದ್ದಾರೆ. ಈ ಕುರಿತು ಪೊಲೀಸರು ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಮಂಡಲ ಅಧ್ಯಕ್ಷ ಮಂಜುನಾಥ ನಾಯ್ಕ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ವರ ಹೆಗಡೆ, ಮಂಕಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸವಿತಾ ನಾಯ್ಕ, ಉಪಾಧ್ಯಕ್ಷೆ ಜ್ಯೋತಿ ಖಾರ್ವಿ ಜಿಲ್ಲಾ ಓಬಿಸಿ ಘಟಕದ ಕಾರ್ಯದರ್ಶಿ ಆನಂದ ನಾಯ್ಕ, ದೀಪಕ ನಾಯ್ಕ, ಆನಂದ ನಾಯ್ಕ, ರಘು ಖಾರ್ವಿ, ನಾಗರಾಜ ನಾಯ್ಕ, ಜಗದೀಶ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-20-2099672345

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.