ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಮರ್ಯಾದೆಗೇಡು ಹತ್ಯೆ; ಪೊಲೀಸರ ವಶಕ್ಕೆ ಯುವತಿ ತಂದೆ

Last Updated 15 ಸೆಪ್ಟೆಂಬರ್ 2018, 20:47 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದ ಮಿರಯಲಗುಡದಲ್ಲಿಶುಕ್ರವಾರ24 ವರ್ಷದ ಯುವಕ ಪ್ರಣಯ್‌ ಕುಮಾರ್‌ ಹತ್ಯೆ ನಡೆದಿದೆ. ಇದು ಮರ್ಯಾದೆಗೇಡು ಹತ್ಯೆ ಎನ್ನಲಾಗಿದೆ. ಈ ಸಂಬಂಧ ಯುವತಿ ಅಮೃತಾ ವರ್ಷಿಣಿ ತಂದೆಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ ಪ್ರಣಯ್‌ ತನ್ನ 5 ತಿಂಗಳ ಗರ್ಭಿಣಿ ಪತ್ನಿ ಅಮೃತಾಳನ್ನು ಸ್ಥಳೀಯ ಆಸ್ಪತ್ರೆಯಿಂದ ತಪಾಸಣೆ ನಡೆಸಿ ಕರೆತರುವ ವೇಳೆ ಪ್ರಣಯ್‌ ಮೇಲೆ ದಾಳಿ ನಡೆದಿದೆ.

ಕೆಳ ಜಾತಿಯವರನ್ನ ಮದುವೆಯಾದುದಕ್ಕೆ ಅಮೃತಾಳ ಮೇಲೆ ಸಂಬಂಧಿ ಶ್ರವಣ್‌ ಹಲವು ಬಾರಿ ಹಲ್ಲೆ ನಡೆಸಿದ್ದು, ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಅಮೃತಾಳ ತಂದೆಮಾರುತಿ ರಾವ್‌ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಪ್ರಣಯ್‌ ಹತ್ಯೆಗಾಗಿ ₹5 ಲಕ್ಷ ಸುಪಾರಿ ಕೊಟ್ಟಿದ್ದರು. ರಾವ್‌ ಅವರಿಗೆ ಜಾತಿ ಮತ್ತು ಪ್ರತಿಷ್ಠೆಯೇ ಮುಖ್ಯವಾಗಿತ್ತು ಎಂದು ನಳಗೊಂಡ ಪೊಲೀಸರು ತಿಳಿಸಿದ್ದಾರೆ.

ಇದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT