ಚೆನ್ನೈ: ಹೊಸೂರಿನಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲು ಮತ್ತು ಮೂಲಸೌಕರ್ಯಗಳಿಗಾಗಿ ಸಾವಿರಾರು ಎಕರೆ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ತಮಿಳುನಾಡು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರನ್ನು ಪೊಲೀಸರು ಸೋಮವಾರ ಬಂಧಿಸಿದರು.

‘ನಮಧು ನೀಲಂ ನಮಧೆ’ ರೈತ ಕಲ್ಯಾಣ ಸಂಘದ ಸದಸ್ಯರು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿದರು.

‘ಕೃಷ್ಣಗಿರಿ ಜಿಲ್ಲೆಯಲ್ಲಿನ ಕೈಗಾರಿಕಾ ಪಾರ್ಕ್ ಸೇರಿದಂತೆ ವಿವಿಧ ಯೋಜನೆಗಳಿಗಾಗಿ 39 ಸಾವಿರ ಎಕರೆ ಕೃಷಿ ಜಮೀನು ಮತ್ತು ಹೊಸೂರಿನಲ್ಲಿ ವಿಮಾನ ನಿಲ್ದಾಣ ಹಾಗೂ ಕಾರಿಡಾರ್ ನಿರ್ಮಾಣಕ್ಕಾಗಿ 29 ಸಾವಿರ ಎಕರೆ ಕೃಷಿ ಜಮೀನು ಸ್ವಾಧೀನಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿದೆ’ ಎಂದು ರೈತರು ಆರೋಪಿಸಿದ್ದಾರೆ.

‘ನಮ್ಮ ಜೀವ ಹೋದರೂ, ನಮ್ಮ ಕೃಷಿ ಜಮೀನುಗಳನ್ನು ನೀಡುವುದಿಲ್ಲ. ಭೂಮಿಯ ರಕ್ಷಣೆಗಾಗಿ ಒಗ್ಗಟ್ಟಾಗಿದ್ದೇವೆ. ರೈತರ ಬದುಕನ್ನು ಕಸಿದುಕೊಳ್ಳದೇ ಅಭಿವೃದ್ಧಿ ನಡೆಸುವ ಸಮತೋಲಿತ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬ ಭರವಸೆ ಇದೆ’ ಎಂದು ಸಂಘದ ಅಧ್ಯಕ್ಷ ಕುಮಾರ ರವಿಶಂಕರ್ ಅವರು ತಿಳಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಿಂದ 50 ಸಾವಿರಕ್ಕೂ ಅಧಿಕ ರೈತ ಕುಟುಂಬಗಳಿಗೆ ಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.

ಕೃಷ್ಣಗಿರಿ ಜಿಲ್ಲೆಯಲ್ಲಿ ಕಾರ್ಖಾನೆ ಸ್ಥಾಪನೆಗೆ ಹಲವು ಕಂಪನಿಗಳು ಆಸಕ್ತಿ ತೋರಿರುವುದರಿಂದ ಕೈಗಾರಿಕಾ ಪಾರ್ಕ್ ನಿರ್ಮಿಸುವ ಅಗತ್ಯ ಇದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅದೇ ಜಿಲ್ಲೆಯಲ್ಲಿನ ಎರಡು ಸ್ಥಳಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಅಂತಿಮಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.