ಕೋಲ್ಕತ್ತ: ಇಲ್ಲಿನ ಹೋಟೆಲ್ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ಖುರ್ಷಿದ್ ಆಲಂ ಎಂದು ಗುರುತಿಸಲಾಗಿದೆ. ಈತನ್ನು ಹೋಟೆಲ್ನ ಒಳಾಂಗಣ ವಿನ್ಯಾಸ ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿದ್ದಾನೆ. ಹೆಚ್ಚಿನದಾಗಿ ಬೆಂಕಿ ಹೊತ್ತಿಕೊಳ್ಳುವಂತಹ ವಸ್ತುಗಳಿಂದ ವಿನ್ಯಾಸ ಮಾಡಿದ್ದೆ ಅನಾಹುತಕ್ಕೆ ಮತ್ತೊಂದು ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಲ್ಲಿನ ಹೋಟೆಲ್ವೊಂದರಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದರು. ಪ್ರಕರಣ ಸಂಬಂಧ ಹೋಟೆಲ್ನ ಮಾಲೀಕ ಮತ್ತು ವ್ಯವಸ್ಥಾಪಕನನ್ನು ಗುರುವಾರ ಬಂಧಿಸಲಾಗಿತ್ತು. ರಿತುರಾಜ್ ಹೋಟೆಲ್ ಮಾಲೀಕ ಆಕಾಶ್ ಚಾವ್ಲಾ ಮತ್ತು ವ್ಯವಸ್ಥಾಪಕ ಗೌರವ್ ಕಪೂರ್ ಬಂಧಿತರು ಎಂದು ಪೊಲೀಸರು ತಿಳಿಸಿದ್ದರು.
.ಕೋಲ್ಕತ್ತ | ಹೋಟೆಲ್ನಲ್ಲಿ ಅಗ್ನಿ ಅವಘಡ: ಮಾಲೀಕ, ವ್ಯವಸ್ಥಾಪಕನ ಬಂಧನ.ಹಣ ಅಥವಾ ಉದ್ಯೋಗ ಬೇಕಾಗಿಲ್ಲ, ಪತಿಗೆ ಹುತಾತ್ಮ ಸ್ಥಾನಮಾನ ನೀಡಬೇಕು: ಶುಭಂ ಪತ್ನಿ.
42 ಕೊಠಡಿಗಳಿದ್ದ 6 ಅಂತಸ್ತಿನ ರಿತುರಾಜ್ ಹೋಟೆಲ್ನಲ್ಲಿ ಮಂಗಳವಾರ ರಾತ್ರಿ 7.30 ಸುಮಾರಿಗೆ ದುರ್ಘಟನೆ ಸಂಭವಿಸಿತ್ತು. ಮೃತರಲ್ಲಿ 11 ಪುರುಷರು, ಒಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ, ಗಾಯಗೊಂಡವರಿಗೆ ₹50000 ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಇದೇ ಪ್ರಮಾಣದಲ್ಲಿ ಪರಿಹಾರ ಘೋಷಿಸಿದ್ದರು.

ಈ ಅವಘಡದ ವೇಳೆ 88 ಮಂದಿ ಅತಿಥಿಗಳು ಮತ್ತು ಸಿಬ್ಟಂದಿ ಇದ್ದರು. ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಹಲವರು ಗಾಬರಿಯಲ್ಲಿ ಕಿಟಕಿಗಳ ಮೂಲಕ ಹೋಟೆಲ್ನಿಂದ ಹೊರಕ್ಕೆ ಹಾರಿ ಮೃತಪಟ್ಟಿದ್ದರು. ಇನ್ನೂ ಕೆಲವರು ಬೆಂಕಿಯ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.
.SSLC result| 2 ಸ್ಥಾನ ಜಿಗಿತ ಕಂಡ ಬೀದರ್; ಕಲ್ಯಾಣ ಕರ್ನಾಟಕದಲ್ಲಿ 3ನೇ ಸ್ಥಾನ.ಮಥುರಾ: ಮುಸ್ಲಿಂ ಕುಟುಂಬದ 8 ಮಂದಿ ಹಿಂದೂ ಧರ್ಮಕ್ಕೆ ಮತಾಂತರ.ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧ.SSLC Result 2025: ಈ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.