ರಾಂಚಿ: ವೆಜ್ ಬಿರಿಯಾನಿ ಕೇಳಿದ ಗ್ರಾಹಕನಿಗೆ ನಾನ್ ವೆಜ್ ಬಿರಿಯಾನಿ ಕೊಟ್ಟ ಹೋಟೆಲ್ ಮಾಲೀಕನ ಮೇಲೆ ಗುಂಡು ಹಾರಿಸಿದ ಘಟನೆ ಜರುಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ವೆಜ್ ಬಿರಿಯಾನಿ ಪಾರ್ಸೆಲ್ ತೆಗೆದುಕೊಂಡು ಹೋಗಿದ್ದ ಗ್ರಾಹಕನು, ನಂತರ ಗುಂಪಿನೊಂದಿಗೆ ಮರಳಿ ಬಂದಿದ್ದಾನೆ. ಹೋಟೆಲ್ನವರು ವೆಜ್ ಬಿರಿಯಾನಿ ಕೇಳಿದರೆ, ನಾನ್ ವೆಜ್ ಬಿರಿಯಾನಿ ನೀಡಿದ್ದಾರೆ ಎಂದು ಆರೋಪಿಸಿ ಜಗಳ ಮಾಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಹೋಟೆಲ್ ಮಾಲೀಕರ ಮೇಲೆ ಗುಂಡು ಹಾರಿಸಿದ್ದರಿಂದ, ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ತೆರಳುವಾಗ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೋಟೆಲ್ ಮಾಲೀಕನನ್ನು ವಿಜಯ್ ಕುಮಾರ್ ನಾಗ್(47) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಘಟನೆಗೆ ಬೇರೆ ಕಾರಣವಿದ್ದರೆ ತಿಳಿಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.