ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಲಕ್ಷದವರೆಗಿನ ಶೈಕ್ಷಣಿಕ ಸಾಲ; ಹಿಮಾಚಲ ಸಂಪುಟ ಅನುಮೋದನೆ

Published 20 ಜೂನ್ 2023, 16:08 IST
Last Updated 20 ಜೂನ್ 2023, 16:08 IST
ಅಕ್ಷರ ಗಾತ್ರ

ಶಿಮ್ಲಾ : ವಾರ್ಷಿಕ ₹4 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಸೇರಿರುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ₹20 ಲಕ್ಷದವರೆಗಿನ ಶೈಕ್ಷಣಿಕ ಸಾಲ ನೀಡುವುದಾಗಿ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿತ್ತು. ಈ ಯೋಜನೆಯನ್ನು ಸಂಪುಟದಲ್ಲಿ ಸೋಮವಾರ ಅನುಮೋದಿಸಯಿತು.

‘ಮುಖ್ಯಮಂತ್ರಿ ವಿದ್ಯಾರ್ಥಿ ಪ್ರೋತ್ಸಾಹನ ಯೋಜನೆ’ ಅಡಿ ಶೈಕ್ಷಣಿಕ ಸಾಲ ಪಡೆಯಲು ಅರ್ಹ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಮಂಗಳವಾರ ಹೇಳಿದರು. 

₹200 ಕೋಟಿ ಮೊತ್ತದ ಯೋಜನೆ ಇದಾಗಿದ್ದು, ಶೇ 1ರಷ್ಟು ಅತ್ಯಲ್ಪ ಮೊತ್ತದ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. 28 ವರ್ಷ ವಯಸ್ಸಿನವರೆಗಿನ ವಿದ್ಯಾರ್ಥಿಗಳು ಈ ಸಾಲ ಪಡೆಯಲು ಅರ್ಹರಾಗಿರುತ್ತಾರೆ. ಸಾಲವು ವಿದ್ಯಾರ್ಥಿಗಳ ವಸತಿ, ಬೋಧನಾ ಶುಲ್ಕ, ಪುಸ್ತಕ ಮತ್ತು ಕಲಿಕೆಗೆ ಸಂಬಂಧಿಸಿದ ಇತರ ಖರ್ಚುಗಳನ್ನು ಒಳಗೊಂಡಿರುತ್ತದೆ ಎಂದು ಸುಖು ಅವರು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡಿಪ್ಲೊಮಾ, ವೃತ್ತಿಪರ ಮತ್ತು ತಾಂತ್ರಿಕ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆಯಬಹುದು. ಇದಕ್ಕಾಗಿ ಹಿಂದಿನ ತರಗತಿಯಲ್ಲಿ ಕಡ್ಡಾಯ ಶೇ 60 ಅಂಕ ಗಳಿಸಿರಬೇಕು. ಆನ್‌ಲೈನ್‌ ಮೂಲಕ ಅಥವಾ ದೂರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರಕುವುದಿಲ್ಲ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಈ–ಮೇಲ್‌ ಮೂಲಕ ಉನ್ನತ ಶಿಕ್ಷಣ ನಿರ್ದೇಶನಾಲಯಕ್ಕೆ ಕಳಿಸಬೇಕು ಮತ್ತು  ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಭರ್ತಿ ಮಾಡಬೇಕು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT