ಹುಬ್ಬಳ್ಳಿ: ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–ಯುಜಿ) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹುಬ್ಬಳ್ಳಿ–ಧಾರವಾಡ ಯುವ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯ ಕೇಶ್ವಾಪುರದ ರಮೇಶ ಭವನದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಮೇಶ ಭವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಕಾರರನ್ನು ಪೊಲೀಸರು ಮಾರ್ಗ ಮಧ್ಯೆ ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಕಾರರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಹುಬ್ಬಳ್ಳಿ-ಧಾರವಾಡ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ ಮಾತನಾಡಿ, ‘ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಸಚಿವರಾದ ನಂತರ ಎರಡನೇ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಅವರು ಕೂಡಲೇ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಪರೀಕ್ಷೆ ರದ್ದುಪಡಿಸಲಾಗಿದ್ದು, ಮರು ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ. ಇದರಿಂದ ಪ್ರಾಮಾಣಿಕವಾಗಿ ಓದಿದ್ದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನೇ (ಎನ್ಟಿಎ) ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

‘ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಕಷ್ಟಪಟ್ಟು, ಹಣ ಖರ್ಚು ಮಾಡಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಅವರ ಭವಿಷ್ಯದ ಮೇಲೆ ಪರಿಣಾಮ ಉಂಟಾಗುತ್ತದೆ. ಇದು ದೇಶದ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ. ನೀಟ್ ಬದಲು ಪರ್ಯಾಯ ಪರೀಕ್ಷೆ ನಡೆಸಲು ಚಿಂತನೆ ನಡೆಸಬೇಕು’ ಎಂದರು.

ನಾಗರಾಜ ಕೊಟಗಿ, ಕಾಸಿಂ ಕೂಡಲಗಿ, ವಸೀಂ, ಶಾನು ಖಾನ್, ಸಂತೋಷ್ ನಾಯಕ್, ಮಂಜುನಾಥ ಉಪ್ಪಾರ್, ಸತೀಶ್ ಬಡಿಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-24-1142241158

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.