ಹುಬ್ಬಳ್ಳಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಹಾಗೂ ಬಿಜೆಪಿಯ ಸುಳ್ಳು ಹೇಳಿಕೆ ಖಂಡಿಸಿ ವಿಶ್ವ ಬಹುಜನ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ವತಿಯಿಂದ ನಗರದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.

‘ಕೇಂದ್ರದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು 12 ವರ್ಷಗಳಾದರೂ ಇಂದಿಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡುವ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ ಗುರಿ ತಲುಪಿಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ’ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಬಹುಜನ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘಟನೆಯ ಪ್ರಮುಖ ಸದಾನಂದ ತೇರದಾಳ ಅಸಮಾಧಾನ ವ್ಯಕ್ತಪಡಿಸಿದರು.

‘ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ₹15 ಲಕ್ಷ ಜಮಾ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಆದರೆ, ಅದು ಕೂಡ ಹಾಕಿಲ್ಲ. ಜನರಿಗೆ ಸುಳ್ಳು ಭರವಸೆ ನೀಡುವ ಮೂಲಕ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ’ ಎಂದು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-23-1905116066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.