ನವದೆಹಲಿ: ಕರ್ನಾಟಕದ ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಷ್ಟ್ರದ 13 ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಯನ್ನು ಮುಂದಿನ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಖಾಸಗಿ ಮತ್ತು ಸಾರ್ವಜನಿಕ ವಲಯದ ಸಹಭಾಗಿತ್ವ (ಪಿಪಿಪಿ)ದ ಆಧಾರದಲ್ಲಿ ನಿರ್ವಹಣೆಗೆ ಒಳಪಡಲಿರುವ ಒಟ್ಟು 13 ವಿಮಾನ ನಿಲ್ದಾಣಗಳ ಪಟ್ಟಿಯನ್ನು ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ವೇಳೆಗೆ ಅವುಗಳ ಖಾಸಗೀಕರಣಕ್ಕಾಗಿ ಹರಾಜು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ)ದ ಅಧ್ಯಕ್ಷ ಸಂಜೀವ್ ಕುಮಾರ್ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ರತಿ ಪ್ರಯಾಣಿಕರಿಂದ ಬರುವ ಆದಾಯವನ್ನು ಆಧರಿಸಿದ ಹರಾಜು ಪ್ರಕ್ರಿಯೆಯ ಮಾದರಿ ಅಡಿ ಈ ಎಲ್ಲ ವಿಮಾನ ನಿಲ್ದಾಣಗಳ ನಿರ್ವಹಣೆಯ ಹೊಣೆಯನ್ನು 50 ವರ್ಷಗಳ ಅವಧಿಗೆ ಖಾಸಗಿಯವರಿಗೆ ವಹಿಸಲು ನಿರ್ಧರಿಸಲಾಗಿದೆ. ಈಗಾಗಲೇ ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿನ ಜೆವಾರ್ ವಿಮಾನ ನಿಲ್ದಾಣವನ್ನೂ ಅದೇ ಮಾದರಿಯ ನಿರ್ವಹಣೆಗೆ ವಹಿಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.

ಈ 13ರ ಪೈಕಿ ಏಳು ಸಣ್ಣ ವಿಮಾನ ನಿಲ್ದಾಣಗಳನ್ನು ದೊಡ್ಡ ವಿಮಾನಗಳೊಂದಿಗೆ ಜೋಡಣೆ ಮಾಡಲು ನಿರ್ಧರಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.