ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿಯಲ್ಲಿ ED ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ಕಂತೆ ಕಂತೆ ನಗದು ವಶ

Published 6 ಮೇ 2024, 4:09 IST
Last Updated 6 ಮೇ 2024, 4:09 IST
ಅಕ್ಷರ ಗಾತ್ರ

ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಇಂದು (ಸೋಮವಾರ) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್‌ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ₹20 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿದ್ದ ವೀರೇಂದ್ರ ರಾಮ್ ಅವರನ್ನು ₹100 ಕೋಟಿ ಮೌಲ್ಯದ ಆಸ್ತಿ ಗಳಿಸಿದ ಆರೋಪದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು. ವೀರೇಂದ್ರ ಅವರ ಬಳಿ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿರುವ ಪೆನ್‌ಡ್ರೈವ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದೇ ಪ್ರಕರಣ ಸಂಬಂಧ ಸಂಜೀವ್ ಲಾಲ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT