ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಛತ್ತೀಸಗಢ: ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ ವಶ

Published 8 ಏಪ್ರಿಲ್ 2024, 2:32 IST
Last Updated 8 ಏಪ್ರಿಲ್ 2024, 2:32 IST
ಅಕ್ಷರ ಗಾತ್ರ

ಸುಖ್ಮಾ(ಛತ್ತೀಸಗಢ): ಛತ್ತೀಸಗಢದ ಸುಖ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದೆ.

ಕಿಸ್ತರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡಮಾರ್ಕ ಮತ್ತು ಡಬ್ಬಮಾರ್ಕ ಹಳ್ಳಿಗಳಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಆರ್‌ಪಿಎಫ್, ಕೋಬ್ರಾ ಮತ್ತು ಬಸ್ತಾರ್ ಬೆಟಾಲಿಯನ್‌ಗಳ ಜಂಟಿ ಕಾರ್ಯಾಚರಣೆಯಲ್ಲಿ ಸ್ಫೋಟಕ ವಶಪಡಿಸಿಕೊಳ್ಳಲಾಗಿದೆ.

350 ಗ್ರಾಂ ಜಿಲೆಟಿನ್ ಸ್ಟಿಕ್ಸ್, 105 ಎಲೆಕ್ಟ್ರಿಕ್ ಡೆಟೊನೇಟರ್ಸ್, ಬ್ಯಾರೆಲ್ ಗ್ರೆನೇಡ್ ಲಾಂಚರ್(ಬಿಜಿಎಲ್), 22 ಬಿಜಿಎಲ್ ಪ್ರೊಜೆಕ್ಟರ್‌ಗಳು, 19 ಬಿಜಿಎಲ್ ಬಾಂಬ್‌ಗಳು, 5 ಕೆ.ಜಿ ತೂಕದ ಸುಧಾರಿತ ಸ್ಫೋಟಕ ಸಾಧನ, 30 ಕೆ.ಜಿ ಗನ್ ಪೌಡರ್ ಮತ್ತು ಮಾವೋವಾದಿಗಳ ಬರಹವಿರುವ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸಗಢದಲ್ಲಿ ನಕ್ಸಲರ ಹಾವಳಿ ಹೆಚ್ಚಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಕಣ್ಗಾವಲನ್ನು ಹೆಚ್ಚಿಸಲಾಗಿದೆ. ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಆಗಾಗ್ಗೆ ಗುಂಡಿನ ಚಕಮಕಿಯೂ ನಡೆಯುತ್ತಿರುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT