ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು| ನೀರಿನ ಟ್ಯಾಂಕ್‌ನಲ್ಲಿ ಮಲ ಪತ್ತೆಯಾದ ಪ್ರಕರಣ: ಸಿಬಿಐಗೆ ನೀಡಲು ಆಗ್ರಹ

Last Updated 18 ಮಾರ್ಚ್ 2023, 16:15 IST
ಅಕ್ಷರ ಗಾತ್ರ

ಪುದುಕೋಟ್ಟೈ: ತಮಿಳುನಾಡಿನ ಪುದುಕೋಟ್ಟೈ ಜಿಲ್ಲೆಯ ದಲಿತ ಕಾಲೋನಿ ವೆಂಗವೆಯಿಲ್‌ಗೆ ಕುಡಿಯುವ ನೀರು ಸರಬರಾಜು ಮಾಡುವ ಟ್ಯಾಂಕ್‌ನಲ್ಲಿ ಮಲ ಪತ್ತೆಯಾದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

2022ರ ಡಿಸೆಂಬರ್‌ನಲ್ಲಿ ನಡೆದ ಈ ಘಟನೆ ಪತ್ರಿಕೆಗಳ ಮುಖಪುಟದಲ್ಲಿ ವರದಿಯಾಗಿತ್ತು. ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವಿಳಂಬವಾಗುತ್ತಿರುವ ಬಗ್ಗೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿ–ಸಿಐಡಿಗೆ ವಹಿಸಲಾಗಿತ್ತು.

‘ಸಿಬಿ-ಸಿಐಡಿ ತನಿಖೆ ನಡೆಸುತ್ತಿದೆ. ಹಲವರನ್ನು ವಿಚಾರಣೆ ನಡೆಸುತ್ತಿದೆ. ಪ್ರಕರಣವು ಸರಿಯಾದ ಹಾದಿಯಲ್ಲಿ ಸಾಗುತ್ತಿಲ್ಲ ಎಂಬ ಭಾವನೆ ನಮ್ಮದು. ನಮ್ಮ ಕೆಲವು ದಲಿತ ಸಹೋದರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣವು ಈಗ ನಮ್ಮ ವಿರುದ್ಧವೇ ತಿರುಗುತ್ತಿರುವ ಬಗ್ಗೆ ನಮಗೆ ಅನುಮಾನಗಳು ಮೂಡುತ್ತಿವೆ’ ಎಂದು ಕಾಲೋನಿಯ ನಿವಾಸಿ ಜಗನ್ನಾಥನ್ ಎಂಬುವವರು ಸುದ್ದಿ ಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಈ ಮಧ್ಯೆ, ಪುದುಕೊಟ್ಟೈನ ಪಿ.ತಿರುಮುಗಂ ಎಂಬುವವರು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿ ಪ್ರಕರಣ ಸಿಬಿಐ ತನಿಖೆಗೆ ಮನವಿ ಮಾಡಿದ್ದಾರೆ.

ತಿರುಮುಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿರುವ ಪೀಠ, ಪ್ರಕರಣ ಸಂಬಂಧ ಕೈಗೊಂಡಿರುವ ವರದಿಯನ್ನು ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಶುಕ್ರವಾರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT