ಹುಣಸೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ಮೈತ್ರಿ ಪಕ್ಷಗಳ ನಡೆ ಖಂಡಿಸಿ ನಗರದ ಸಂವಿಧಾನ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷ ಪ್ರಫುಲ್ಲಾ ಮಲ್ಲಾಡಿ ಮಾತನಾಡಿ, ಮಹಿಳೆಯರಿಗೆ ಎಲ್ಲಾ ರಂಗದಲ್ಲೂ ಪುರುಷ ಸರಿಸಮಾನ ಅವಕಾಶ ನೀಡುವ ಉದ್ದೇಶದಲ್ಲಿ ಕೇಂದ್ರ ಸರ್ಕಾರ ಶೇ 33ರಷ್ಟು ಮಹಿಳಾ ಮೀಸಲಾತಿ ಬಿಲ್ ಮಂಡಿಸಿ ಸಾಮಾಜಿಕ ನ್ಯಾಯಕ್ಕೆ ಧ್ವನಿಗೂಡಿಸಿದರೂ, ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಒಕ್ಕೂಟ ವಿರೋಧಿಸಿ ಮಹಿಳೆಯರನ್ನು ಕತ್ತಲೆಯಲ್ಲಿ ಇಡುವಂತೆ ಮಾಡಿರುವುದು ಖಂಡನೀಯ ಎಂದರು.

‘ಪ್ರಧಾನಿ ಮೋದಿ ಶೇ 33ರಷ್ಟು ಮೀಸಲು ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಸಿಕ್ಕು ಮಹಿಳೆ ಪುರುಷರಂತೆ ಸಮಾಜಮುಖಿಯಾಗಬೇಕು ಎಂಬ ದೃಷ್ಟಿಯಲ್ಲಿ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆದು ಬಿಲ್ ಮಂಡಿಸಿ ಚರ್ಚೆಗೆ ಅವಕಾಶ ಕಲ್ಪಿಸಿದ್ದರು. ಮಹಿಳೆಯರ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ ಪ್ರಧಾನಿ ಮೋದಿ ಅವರ ಇಚ್ಛೆಗೆ ವಿರೋಧ ಪಕ್ಷದವರು ತಮ್ಮ ರಾಜಕೀಯ ಇಚ್ಛಾಶಕ್ತಿ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಕಾಯ್ದೆ ಬಿಲ್ ವಿರೋಧಿಸಿ ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸಿದ್ದಾರೆ’ ಎಂದು ದೂರಿದರು.

ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಷ್ಟೆ ಸಮನಾಗಿ ತೊಡಗಿಸಿಕೊಳ್ಳಬೇಕು ಎಂದು ವೇದಿಕೆಯಲ್ಲಿ ಭಾಷಣ ಮಾಡುವ ರಾಹುಲ್ ಗಾಂಧಿ, ಸದನದ ಒಳಗೆ ಏಕೆ ವಿರೋಧಿಸಿದರು? ಸದನದಲ್ಲಿ ತಾಯಿ, ಅಕ್ಕ ಇಬ್ಬರು ಮಾತ್ರ ನೇತಾರರಂತೆ ಕಂಗೊಳಿಸಬೇಕೇ? ಸಾಮಾನ್ಯ ಮಹಿಳೆ ಮೀಸಲಾತಿ ಸವಲತ್ತು ಬಳಸಿ ಸದನ, ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಉದ್ದೇಶ ಪೂರಕವಾಗಿ ಇಂಡಿಯಾ ಮೈತ್ರಿಕೂಟದ ರಾಜಕೀಯ ಪಕ್ಷಗಳು ತಿರಸ್ಕರಿಸಿ ಮಹಿಳೆಯರನ್ನು ಅಗೌರವದಿಂದ ಕಂಡಿರುವುದು ದೇಶದ ನಾರಿಶಕ್ತಿಗೆ ಕಾಂಗ್ರೆಸ್ ಮಾಡಿದ ಅವಮಾನ ಎಂದರು.

ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಚವ್ಹಾಣ್ ಮಾತನಾಡಿದರು. ನಗರ ಬಿಜೆಪಿ ಅಧ್ಯಕ್ಷ ನಾರಾಯಣ್ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ, ನಾಗರಾಜ್ ಮಲ್ಲಾಡಿ, ಹನಗೋಡು ಮಂಜುನಾಥ್, ಬಿಳಿಕೆರೆ ಪ್ರಸನ್ನ, ಸುರೇಶ್, ಅರುಣ್ ಚವ್ಹಾಣ್, ರಾಘವೇಂದ್ರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-38-589683558

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.