ಹೈದರಾಬಾದ್: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಬುಧವಾರ ಗೈರಾಗಿದ್ದಾರೆ.

ಅವರನ್ನು ಪತ್ತೆಹಚ್ಚಲು ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡುವಂಥ ಪೋಸ್ಟರ್ಗಳು ಹೈದರಾಬಾದ್ನ ವಿವಿಧ ಪ್ರದೇಶಗಳಲ್ಲಿ ಕಂಡುಬಂದಿದ್ದು, ರಾಜಕೀಯ ಚರ್ಚೆಗೂ ಗ್ರಾಸವಾಗಿದೆ.

ಬುಧವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಪೇಟ್ ಬಷೀರಾಬಾದ್ ಠಾಣೆಯಪೊಲೀಸರು ಭಗೀರಥ ಅವರಿಗೆ ನೋಟಿಸ್ ನೀಡಿದ್ದರು. ಆದಾಗ್ಯೂ, ಭಗೀರಥ ವಿಚಾರಣೆಗೆ ಹಾಜರಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭಗೀರಥ ಅವರು ಸಲ್ಲಿಸಿರುವ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.

ವಿಚಾರಣೆಗೆ ಹಾಜರಾಗದೇ ಭಗೀರಥ ತಲೆಮರೆಸಿಕೊಂಡಿರುವ ಬಗ್ಗೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣವೇ ಅವರನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸಿವೆ. ಪೊಲೀಸರು, ಭಗೀರಥ ವಿರುದ್ಧದ ಪ್ರಕರಣದಲ್ಲಿನ ಸೆಕ್ಷನ್ಗಳನ್ನು ಪರಿಷ್ಕರಿಸಿದ್ದಾರೆ.

ತೆಲಂಗಾಣ ರಕ್ಷಣಾ ಸೇನಾದ ಮುಖ್ಯಸ್ಥೆ ಕೆ.ಕವಿತಾ ಅವರೂ ಈ ಕುರಿತು ಮಾತನಾಡಿ, ‘ಇಂಥ ಆರೋಪಗಳನ್ನು ಹೊತ್ತ ವ್ಯಕ್ತಿಗಳು ದೇಶದಿಂದ ಪರಾರಿಯಾಗಲು ಆಸ್ಪದ ನೀಡುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಹೀಗಾಗಿ ತಕ್ಷಣವೇ ಭಗೀರಥ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-51-1190812174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.