ಹೈದರಾಬಾದ್: ಹೈದರಾಬಾದ್ನಲ್ಲಿ 10 ವರ್ಷದ ಬಾಲಕಿಯನ್ನು ಇರಿದು ಸ್ವಗೃಹದಲ್ಲೇ ಹತ್ಯೆಗೈಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಬಾಲಕಿಯು 6ನೇ ತರಗತಿಯಲ್ಲಿ ಓದುತ್ತಿದ್ದಳು. ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲಿ ಒಬ್ಬಳೆ ಇದ್ದಳು. ಅದೇ ವೇಳೆ ಅಪರಿಚಿತರು ಇರಿದು ಕೊಲೆ ಮಾಡಿರುವುದಾಗಿ ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಳಗ್ಗೆ 9 ಗಂಟೆಯ ಸುಮಾರಿಗೆ ಬಾಲಕಿಯ ಪೋಷಕರಿಬ್ಬರು ಮಗನನ್ನು ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗಿದ್ದಾರೆ. ಬಾಲಕಿಯ ತಂದೆ ಮಧ್ಯಾಹ್ನ ಊಟದ ಬಾಕ್ಸ್ ತೆಗೆದುಕೊಂಡು ಹೋಗಲು ಮನೆಗೆ ಬಂದಾಗ ಮಗಳು ಶವವಾಗಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಾಲಕಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವರೆಗೆ ಬಾಲಕಿಯ ಪೋಷಕರು ಪ್ರಕರಣವನ್ನು ದಾಖಲಿಸಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.