ನವದೆಹಲಿ: ಹೈದರಾಬಾದ್‌ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಘಟನೆ ಕುರಿತ ತನಿಖಾ ಆಯೋಗಕ್ಕೆ ಸುಪ್ರೀಂ ಕೋರ್ಟ್, ಇನ್ನೂ ಆರು ತಿಂಗಳು ಕಾಲಾವಕಾಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಸಮಿತಿಯು ಈ ಆದೇಶ ನೀಡಿದೆ. ಉತ್ತರಪ್ರದೇಶದಲ್ಲಿ ನಡೆದಿದ್ದ ಇಂತಹದೇ ಘಟನೆ ವಿಕಾಸ್ ದುಬೆ ಎನ್‌ಕೌಂಟರ್ ಪ್ರಕರಣದ ತನಿಖಾ ಆಯೋಗವು ಈಗಾಗಲೇ ವರದಿ ಸಲ್ಲಿಸಿದೆ ಎಂದು ಪೀಠ ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು.

ಹೈದರಾಬಾದ್ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ವಿ.ಎಸ್.ಸಿರ್ಪುರ್‌ಕರ್ ಆಯೋಗದ ಪರ ಹಾಜರಿದ್ದ ವಕೀಲ ಪರಮೇಶ್ವರ್ ಅವರು, ಕೋವಿಡ್ ಪರಿಸ್ಥಿತಿಯ ನಡುವೆ ಒಟ್ಟು 130 ಸಾಕ್ಷಿಗಳ ಹೇಳಿಕೆ ದಾಖಲಿಸಿಬೇಕಿದ್ದರಿಂದ ವಿಳಂಬವಾಗಿದೆ ಎಂದರು. ಆಗ ಆರು ತಿಂಗಳು ಸಮಯ ವಿಸ್ತರಿಸಿ ಪೀಠ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.