ಹೈದರಾಬಾದ್: ಇಲ್ಲಿನ ನಾಂಪಲ್ಲಿ ಪ್ರದೇಶದ 4 ಅಂತಸ್ತಿನ ಪೀಠೋಪಕರಣ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿ ಐದು ಮಂದಿ ಮೃತಪಟ್ಟಿದ್ದಾರೆ.

‘ದುರ್ಘಟನೆಯಲ್ಲಿ ಇಬ್ಬರು ಮಕ್ಕಳು., ವೃದ್ಧ ಮಹಿಳೆ ಸೇರಿ ಐವರು ಮೃತಪಟ್ಟಿದ್ದು, ಕಟ್ಟಡದ ನೆಲಮಾಳಿಗೆಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅವರು ಉಸಿರುಗಟ್ಟಿ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗಿದೆ. ಆದರೂ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಕಿ ಅವಘಡದ ಕಾರಣದ ಬಗ್ಗೆ ಕೇಳಿದಾಗ, ಅದು ತನಿಖಾ ಹಂತದಲ್ಲಿದೆ ಎಂದು ಅಧಿಕಾರಿ ಉತ್ತರಿಸಿದ್ದಾರೆ. ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ತೆಲಂಗಾಣ ಅಗ್ನಿಶಾಮಕ, ವಿಪತ್ತು ಸ್ಪಂದನೆ, ತುರ್ತು ಮತ್ತು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ ವಿಕ್ರಮ್ ಸಿಂಗ್, ಕಟ್ಟಡದ ಎರಡೂ ನೆಲಮಾಳಿಗೆಗಳಲ್ಲಿ ಸಂಗ್ರಹಿಸಲಾದ ವಸ್ತುಗಳಲ್ಲಿ ಪೀಠೋಪಕರಣಗಳು, ಕಚ್ಚಾ ವಸ್ತುಗಳು, ರಾಸಾಯನಿಕಗಳು, ಪ್ಲಾಸ್ಟಿಕ್, ಹಾಸಿಗೆಗಳು, ಫೋಮ್ ಇದ್ದವು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.