ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌: ಅಮಿತ್‌ ಶಾ ವಿರುದ್ಧ ಎಫ್‌ಐಆರ್

Published 4 ಮೇ 2024, 3:18 IST
Last Updated 4 ಮೇ 2024, 3:18 IST
ಅಕ್ಷರ ಗಾತ್ರ

ಹೈದರಾಬಾದ್‌: ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತರನ್ನು ಬಳಸಿಕೊಂಡ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಮೇ 1 ರಂದು ಲಾಲ್ದವಾಜಾದಿಂದ ಸುಧಾ ಟಾಕೀಸ್‌ವರೆಗೆ ನಡೆದ ಬಿಜೆಪಿಯ ಚುನಾವಣಾ ರ್‍ಯಾಲಿಯಲ್ಲಿ ಕೆಲವು ಅಪ್ರಾಪ್ತರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು’ ಎಂದು ತೆಲಂಗಾಣ ಮುಖ್ಯ ಚುನಾವಣಾಧಿಕಾರಿಗೆ ನೀಡಿದ ದೂರಿನಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಿರಂಜನ್ ರೆಡ್ಡಿ ಆರೋಪಿಸಿದ್ದರು.

‘ಮಗುವಿನ ಕೈಯಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇದ್ದಿರುವುದು ಗಮನಕ್ಕೆ ಬಂದಿದೆ. ಇದು ಚುನಾವಣಾ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದೂ ರೆಡ್ಡಿ ದೂರಿನಲ್ಲಿ ಉಲ್ಲೇಖಿಸಿದ್ದರು.

ದೂರಿನ ಆಧಾರದ ಮೇಲೆ ವಾಸ್ತವತೆಯನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ನಗರ ಪೊಲೀಸರಿಗೆ ಪ್ರಕರಣವನ್ನು ರವಾಸಿದ್ದರು. ಮೊಘಲ್‌ಪುರ ಪೊಲೀಸ್ ಠಾಣೆಯಲ್ಲಿ ಅಮಿತ್‌ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪಕ್ಷದ ನಾಯಕರಾದ ಟಿ. ಯಮನ್ ಸಿಂಗ್, ಜಿ. ಕಿಶನ್ ರೆಡ್ಡಿ ಮತ್ತು ಶಾಸಕ ಟಿ. ರಾಜಾ ಸಿಂಗ್ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕ ಹೊರಡಿಸಿದ ಆದೇಶದ ಉಲ್ಲಂಘನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT