ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್: ವಿದೇಶಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ; ಪ್ರಾಧ್ಯಾಪಕನ ಬಂಧನ

Last Updated 3 ಡಿಸೆಂಬರ್ 2022, 9:45 IST
ಅಕ್ಷರ ಗಾತ್ರ

ಹೈದರಾಬಾದ್: ವಿದೇಶಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಅಧಿಕಾರಿಯ ದೂರಿನ ಅನ್ವಯ 62 ವರ್ಷದ ಪ್ರೊಫೆಸರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಥಾಯ್ಲೆಂಡ್‌ನ ಸ್ನಾತಕೋತ್ತರ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿರುವ ಪ್ರೊಫೆಸರ್, ಶುಕ್ರವಾರ ಸಂಜೆ ತನ್ನ ಮನೆಯಲ್ಲಿ ವಿದ್ಯಾರ್ಥಿನಿಗೆ ಚುಂಬನ ನೀಡಿ ತಬ್ಬಿಕೊಳ್ಳಲು ಯತ್ನಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಗೆ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತನಾಡಲು ಬಾರದ ಕಾರಣ ಆಕೆಯ ಹೇಳಿಕೆ ದಾಖಲಿಸಲು ಅನುವಾದಕರ ನೆರವನ್ನು ಪಡೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT