ಮುಂಬೈ: ಇಲ್ಲಿನ 'ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ'ದಲ್ಲಿ ₹ 50 ಕೋಟಿ ಮೌಲ್ಯದ ವಜ್ರ, ಚಿನ್ನ ಹಾಗೂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, 8 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜನವರಿ 28ರಿಂದ 31ರ ಅವಧಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ, ₹ 50.11 ಕೋಟಿ ಮೌಲ್ಯದ 50.11 ಕೆ.ಜಿ. ಗಾಂಜಾ, ₹ 93.8 ಲಕ್ಷ ಬೆಲೆಯ ವಜ್ರ ಮತ್ತು ₹ 1.5 ಕೋಟಿಯಷ್ಟು ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಮುಂಬೈ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಕಸ್ಟಮ್ಸ್ ಕಾಯ್ದೆ ಅಡಿಯಲ್ಲಿ ಒಟ್ಟು ಆರು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.