ಜೋಧಪುರ/ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಅಧಿಕ ರಕ್ತದೊತ್ತಡದಿಂದ ಅಸ್ವಸ್ಥರಾಗಿದ್ದು, ಜೋಧಪುರದ ‘ಏಮ್ಸ್’ಗೆ ಸೋಮವಾರ ದಾಖಲಿಸಲಾಗಿದೆ.

ಮಧ್ಯಾಹ್ನ ಹೊಸಬಾಳೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಏಮ್ಸ್ಗೆ ದಾಖಲಿಸಲಾಯಿತು. ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

‘ಹೊಸಬಾಳೆ ಅವರು ಆರೋಗ್ಯವಾಗಿದ್ದಾರೆ’ ಎಂದು ಆರ್ಎಸ್ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಅಂಬೇಕರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್’ ಮೂಲಕ ಮಾಹಿತಿ ನೀಡಿದ್ದಾರೆ.

ಆರ್ಎಸ್ಎಸ್ ಆಯೋಜಿಸಿದ್ದ ಮೂರು ದಿನಗಳ ವಾರ್ಷಿಕ ಸಮನ್ವಯ ಸಭೆಯಲ್ಲಿ ಪಾಲ್ಗೊಳ್ಳಲು ಹೊಸಬಾಳೆ ಅವರು ಜೋಧಪುರಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.