ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಆರೋಪ: ಲೋಕಸಭೆಯಲ್ಲಿ ನಿರ್ಮಲಾ–ಅಧೀರ್ ಜಟಾಪಟಿ

Published 5 ಫೆಬ್ರುವರಿ 2024, 15:11 IST
Last Updated 5 ಫೆಬ್ರುವರಿ 2024, 15:11 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳ ಆಡಳಿತ ಹೊಂದಿರುವ ರಾಜ್ಯಗಳಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ಅಧೀರ್‌ ರಂಜನ್‌ ಚೌಧರಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಡುವೆ ಸೋಮವಾರ ಜಟಾಪಟಿ ನಡೆದಿದೆ.

ಅಧೀರ್‌ ರಂಜನ್‌ ಅವರು ತಾರತಮ್ಯದ ವಿಚಾರವನ್ನು ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ‍ಪ್ರಸ್ತಾ‍ಪಿಸಿದರು. ಆದರೆ, ನಿರ್ಮಲಾ ಸೀತಾರಾಮನ್‌ ಇದನ್ನು ಬಲವಾಗಿ ಅಲ್ಲಗಳೆದರು. ‘ಪಟ್ಟಭದ್ರ ಹಿತಾಸಕ್ತಿಗಳು ಇಂತಹ ರಾಜಕೀಯಪ್ರೇರಿತ ಆರೋಪ ಮಾಡುತ್ತಿವೆ. ಆ ಮೂಲಕ ಸಂತೋಷ ಪಡುತ್ತಿವೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 

‘ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಂತಹ ಪರಿಸ್ಥಿತಿ ಉದ್ಬವಿಸಿಲ್ಲ. ಹಣಕಾಸು ಆಯೋಗದ ಶಿಫಾರಸಿನ ‍ಪ್ರಕಾರ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ’ ಎಂದು ನಿರ್ಮಲಾ ಸ್ಪಷ್ಟಪಡಿಸಿದರು. ಈ ವೇಳೆ ನಿರ್ಮಲಾ ಹಾಗೂ ಅಧೀರ್‌ ನಡುವೆ ಮಾತಿನ ಜಟಾಪಟಿ ನಡೆಯಿತು. 

ಕೇಂದ್ರ ಸರ್ಕಾರವು ಅನುದಾನ ಬಿಡುಗಡೆಯಲ್ಲಿ ಅನ್ಯಾಯ, ತಾರತಮ್ಯ ಹಾಗೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರವು ಬುಧವಾರ (ಇದೇ 7ರಂದು) ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT