ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಕ್ಷಮಿಸಿಬಿಡಿ: ಶುಲ್ಕ ಭರಿಸಲಾಗದೆ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣ ರಾಜ್ಯದಲ್ಲಿ ಕಾಲೇಜು ಶುಲ್ಕ ಭರಿಸಲಾಗದಿರುವುದಕ್ಕೆ ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೊ ಮಾಡಿದ್ದು, ಅದರಲ್ಲಿ ತಮ್ಮ ಕುಟುಂಬದವರು ಕಾಲೇಜು ಶುಲ್ಕವನ್ನು ಹೊಂದಿಸಲು ಪಟ್ಟಿರುವ ಕಷ್ಟವನ್ನು ವಿವರಿಸಿದ್ದಾರೆ. ‘ನನ್ನಿಂದ ಸಾಧ್ಯವಿಲ್ಲ, ಓದಲು ಆಗುತ್ತಿಲ್ಲ, ಇನ್ನು ನಾನು ನಿಮಗೆ ತೊಂದರೆ ಕೊಡುವುದಿಲ್ಲ, ಅಪ್ಪನನ್ನು ಸಾಲದ ಸುಳಿಯಲ್ಲಿ ಸಿಲುಕಿಸಲಾರೆ, ದಯವಿಟ್ಟು ನನ್ನ ಕ್ಷಮಿಸಿಬಿಡಿ‘ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವಿದ್ಯಾರ್ಥಿನಿಗೆ 21 ವರ್ಷ ವಯಸ್ಸಾಗಿದ್ದು,ತಂದೆ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದು, ತಾಯಿ ದಿನಗೂಲಿ ಕೆಲಸ ಮಾಡುತ್ತಾರೆ. ಈ ಕುಟುಂಬ ವಾನಾಪರ್ತಿಯ ಹರಿಜನವಾಡದಲ್ಲಿ ವಾಸವಾಗಿದೆಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಎರಡನೇ ವರ್ಷದ ಬಿ.ಟೆಕ್‌ ಓದುತ್ತಿದ್ದರು. ಆನ್‌ಲೈನ್‌ ಕ್ಲಾಸಿಗೆ ಹಾಜರಾಗುತ್ತಿದ್ದರು. ಪರೀಕ್ಷೆಗೆ ಶುಲ್ಕ ಕಟ್ಟುವುದು ಅಗತ್ಯವಾಗಿತ್ತು ಎಂದು ಪೊಲೀಸ್‌ ಇನ್ಸ್‌ಪೆಕ್ಟರ್‌ ಮಧುಸೂದನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT