ನವದೆಹಲಿ: ‘ಪ್ರತಿಸ್ಪರ್ಧಿಯನ್ನೂ ಗುರು ಎಂದು ಪರಿಗಣಿಸುತ್ತೇನೆ. ಅವರ ವರ್ತನೆ, ಸುಳ್ಳು ಮತ್ತು ಮಾತುಗಳು ನಾನು ಅನುಸರಿಸುತ್ತಿರುವ ಮಾರ್ಗ ಸರಿಯಾಗಿದೆ ಎಂದು ತೋರಿಸಿಕೊಡುತ್ತವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಶಿಕ್ಷಕರ ದಿನದ ಹಿನ್ನೆಲೆಯಲ್ಲಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಸಮಾನತೆ ಮತ್ತು ಪ್ರೀತಿಯ ತತ್ವವನ್ನು ಸಾರಿದ ಮಹಾತ್ಮ ಗಾಂಧಿ, ಗೌತಮ ಬುದ್ಧ, ಶ್ರೀ ನಾರಾಯಣ ಗುರುಗಳಂಥ ಶ್ರೇಷ್ಠ ವ್ಯಕ್ತಿಗಳನ್ನು ಗುರುಗಳೆಂದು ಪರಿಗಣಿಸುತ್ತೇನೆ. ಶಿಕ್ಷಕರ ದಿನದಂದು ಮಾಜಿ ರಾಷ್ಟ್ರಪತಿ ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ಸೇರಿದಂತೆ ಎಲ್ಲಾ ಗೌರವಾನ್ವಿತ ಗುರುಗಳಿಗೆ ನಮನ ಸಲ್ಲಿಸುತ್ತೇನೆ. ಜೀವನದಲ್ಲಿ ಗುರುವಿನ ಪಾತ್ರ ತುಂಬ ಮುಖ್ಯ. ಅವರು ಜೀವನವು ಪ್ರಕಾಶಿಸುವಂತೆ ಮತ್ತು ಸರಿಯಾದ ದಿಕ್ಕಿನಲ್ಲಿ ಸಾಗುವಂತೆ ಪ್ರೇರೇಪಿಸುತ್ತಾರೆ’ ಎಂದು ಹೇಳಿದ್ದಾರೆ.
‘ಈ ದೇಶದ ಜನರೂ ಗುರುಗಳಂತೆ. ‘ವಿವಿಧತೆಯಲ್ಲಿ ಏಕತೆ’ ಇದೆ ಮತ್ತು ಪ್ರತಿ ಸಮಸ್ಯೆ ವಿರುದ್ಧ ಧೈರ್ಯದಿಂದ ಹೋರಾಡಬೇಕು ಎಂದು ತೋರಿಸಿಕೊಟ್ಟಿದ್ದಾರೆ. ಅವರು ಮಾನವೀಯತೆಯ ಸಾಕಾರ ಮೂರ್ತಿಗಳು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.