ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷಗಳವರೆಗೂ ಉಳಿಯುವುದಿಲ್ಲ ಎಂಬ ಅನುಮಾನವನ್ನು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲು ವಿಫಲವಾದರೆ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ರಾಜಕೀಯ ಬದಲಾವಣೆಗಳಾಗಬಹುದು ಎಂದು ಹೇಳಿದರು.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಪಕ್ಷ ಸೋಲು ಕಂಡ ನಂತರ ಕೆಲ ಶಾಸಕರು ಪಕ್ಷ ತೊರೆಯಬಹುದು ಎಂಬ ವದಂತಿಗಳನ್ನು ಅವರು ತಳ್ಳಿಹಾಕಿದರು.

ನಾಯಕರು ಪಕ್ಷ ತೊರೆಯಲಿದ್ದಾರೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ನಮ್ಮ ನಾಯಕರು ಅವರೊಂದಿಗೆ ಮಾತನಾಡಿದ್ದು, ಸ್ಥಳೀಯ ಸಮಸ್ಯೆಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.