ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್‌ಕೈಂಡ್ ಫಾರ್ಮಾಕ್ಕೆ ಸೇರಿದ ಆಸ್ತಿ ಮೇಲೆ ಐಟಿ ದಾಳಿ

Published 11 ಮೇ 2023, 11:40 IST
Last Updated 11 ಮೇ 2023, 11:40 IST
ಅಕ್ಷರ ಗಾತ್ರ

ನವದೆಹಲಿ: ತೆರಿಗೆ ವಂಚನೆ ಆರೋಪದ ಮೇಲೆ ಮ್ಯಾನ್‌ಕೈಂಡ್‌ ಫಾರ್ಮಾ ಸಂಸ್ಥೆಯ ಆವರಣದಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆಯು ಗುರುವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿಯ ಸಂಸ್ಥೆಗೆ ಸೇರಿದ ಆಸ್ತಿಪಾಸ್ತಿಗಳಲ್ಲಿ ಶೋಧ ನಡೆಸಲಾಗಿದೆ. ಹಲವಾರು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ಹೇಳಿವೆ. 

ಸಂಸ್ಥೆಯು ಮಂಗಳವಾರವಷ್ಟೇ ಷೇರುಪೇಟೆಗೆ ಕಾಲಿಟ್ಟಿತ್ತು. 1991ರಲ್ಲಿ ಸ್ಥಾಪನೆಯಾದ ಮ್ಯಾನ್‌ಕೈಂಡ್‌ ಫಾರ್ಮಾ, ದೇಶದ ಪ್ರಮುಖ ಔಷಧ ತಯಾರಿಕಾ ಸಂಸ್ಥೆಗಳಲ್ಲಿ ಒಂದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT