ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

NDA ಜೊತೆ ಸದಾ ಇರುವೆ: PM ಮೋದಿಗೆ ಭರವಸೆ ನೀಡಿದ ಬಿಹಾರ CM ನಿತೀಶ್ ಕುಮಾರ್

Published 2 ಮಾರ್ಚ್ 2024, 11:21 IST
Last Updated 2 ಮಾರ್ಚ್ 2024, 11:21 IST
ಅಕ್ಷರ ಗಾತ್ರ

ಔರಂಗಾಬಾದ್ (ಬಿಹಾರ): ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದೊಂದಿಗೆ ಸದಾ ಇರುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾಗ್ದಾನ ಮಾಡಿದ್ದಾರೆ.

ಬಿಹಾರ ರಾಜ್ಯದಲ್ಲಿ ಕೇಂದ್ರ ಕೈಗೊಳ್ಳಲಿರುವ ₹21,400 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಮಾತನಾಡಿದ ನಿತೀಶ್, ‘ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟವು 400ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲಲಿದೆ. ನಾನು ಎನ್‌ಡಿಎ ಜತೆ ಸದಾ ಇರುತ್ತೇನೆ’ ಎಂದು ಭರವಸೆ ನೀಡಿದರು.

'ಪ್ರಧಾನಿ ಮೋದಿ ಅವರಿಗೆ ಬಿಹಾರಕ್ಕೆ ಸ್ವಾಗತ. ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಕೆಲಸಗಳು ಈಗ ತ್ವರಿತಗತಿಯಲ್ಲಿ ಸಾಗಲಿದೆ ಹಾಗೂ ರಾಜ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ. ಬಿಹಾರದ ಜನ ಹಿಂದಿಗಿಂತಲೂ ಈಗ ಹೆಚ್ಚು ಆರ್ಥಿಕವಾಗಿ ಸಬಲರಾಗಿರುವ ಭಾವವನ್ನು ಅನುಭವಿಸುತ್ತಿದ್ದಾರೆ’ ಎಂದರು.

ಮಹಾಘಟಬಂಧನದಿಂದ ಹೊರಬಂದ ನಿತೀಶ್, ತಮ್ಮ ಹಳೆಯ ಎನ್‌ಡಿಎ ಮೈತ್ರಿಯೊಂದಿಗೆ ಕೈಜೋಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT