ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಗ್–21 ವಿಮಾನಗಳ ಹಾರಾಟ ತಾತ್ಕಾಲಿಕ ಸ್ಥಗಿತ

Published 20 ಮೇ 2023, 16:14 IST
Last Updated 20 ಮೇ 2023, 16:14 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತೀಯ ವಾಯು‍ಪಡೆಯು (ಐಎಎಫ್‌) ಸುಮಾರು 50, ಮಿಗ್‌–21 ಯುದ್ಧ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ’ ಎಂದು ಮೂಲಗಳು ಶನಿವಾರ ತಿಳಿಸಿವೆ. 

ಎರಡು ವಾರಗಳ ಹಿಂದೆ ಮಿಗ್‌–21 ವಿಮಾನವೊಂದು ರಾಜಸ್ಥಾನದ ಹನುಮಾನಗಢದ ಮನೆಯೊಂದರ ಮೇಲೆ ಪತನವಾಗಿತ್ತು. ಘಟನೆಯಲ್ಲಿ ಮನೆಯಲ್ಲಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

‘ಎಲ್ಲಾ ಮಿಗ್‌ ವಿಮಾನಗಳನ್ನೂ ತಾಂತ್ರಿಕ ಪರಿಶೀಲನೆಗೆ ಕಳುಹಿಸಲಾಗುತ್ತದೆ. ಸಂಬಂಧಪಟ್ಟ ತಜ್ಞರ ತಂಡವು ಒಪ್ಪಿಗೆ ಸೂಚಿಸಿದ ಬಳಿಕವಷ್ಟೇ ಅವುಗಳ ಮರು ಹಾರಾಟಕ್ಕೆ ಅನುಮತಿ ನೀಡಲಾಗುತ್ತದೆ’ ಎಂದು ಮೂಲಗಳು ಹೇಳಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT