ಹೈದರಾಬಾದ್: ನಗರದ ಸಂತೋಷ್ ನಗರದ ವ್ಯಾಪ್ತಿಯಲ್ಲಿ ಶ್ರೀ ಭೂಲಕ್ಷ್ಮಿ ಮಾತಾ ದೇವಸ್ಥಾನದಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಆಗ್ನೇಯ ಡಿಸಿಪಿ ಕಾಂತಿಲಾಲ್ ಪಾಟೀಲ್ ಹೇಳಿದ್ದಾರೆ.
‘ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಕಾಂತಿಲಾಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.