ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಕಚ್ಚಾ ಬಾಂಬ್‌ ಪತ್ತೆ

Published 17 ಏಪ್ರಿಲ್ 2024, 13:05 IST
Last Updated 17 ಏಪ್ರಿಲ್ 2024, 13:05 IST
ಅಕ್ಷರ ಗಾತ್ರ

ಮೇಂಧರ್‌/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತಾ ಪಡೆಗಳು ಬುಧವಾರ ಶೋಧ ಕಾರ್ಯ ಕೈಗೊಂಡ ಸಂದರ್ಭದಲ್ಲಿ ಕಚ್ಚಾ ಬಾಂಬ್‌ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಪೊಲೀಸ್, ರಾಷ್ಟ್ರೀಯ ರೈಫಲ್ಸ್‌ ಮತ್ತು ಸಿಆರ್‌ಪಿಎಫ್‌ ಪಡೆಗಳು ಮೇಂಧರ್‌ ಉಪ ವಿಭಾಗದ ಸಮೀಪದ ಅರಣ್ಯ ಪ್ರದೇಶದಲ್ಲಿ ಶೋಧ  ಕೈಗೊಂಡಿದ್ದ ವೇಳೆ ಬಾಂಬ್‌ ಪತ್ತೆಯಾಗಿದೆ. ಅದನ್ನು ಕಲ್ಲುಬಂಡೆಯ ನಡುವೆ ಪೊಟರೆಯಲ್ಲಿ ಇಡಲಾಗಿತ್ತು. ಬಾಂಬ್ ನಿಷ್ಕ್ರಿಯ ದಳವು ಕೂಡಲೇ ಸ್ಥಳಕ್ಕೆ ಆಗಮಿಸಿ ಅದನ್ನು ನಿಷ್ಕ್ರಿಯಗೊಳಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT