ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾದ‌ಲ್ಲಿ ಅಧಿಕಾರಕ್ಕೆ ಬಂದರೆ ಮಾಸಿಕ ₹26 ಸಾವಿರ ಸಿಗಲಿದೆ: ಕಾಂಗ್ರೆಸ್

Published 29 ಮೇ 2024, 3:18 IST
Last Updated 29 ಮೇ 2024, 3:18 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಜ್ಯದ ಬಡ ಕುಟುಂಬಗಳು ಮಾಸಿಕ ಕನಿಷ್ಠ ₹ 26 ಸಾವಿರ ಆರ್ಥಿಕ ನೆರವು ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದರು.

ಇಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅಜಯ್ ಕುಮಾರ್‌, ‘ಒಂದು ವೇಳೆ ಒಡಿಶಾದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹ 2 ಸಾವಿರ, ರೈತರಿಗೆ, ವಿಧವೆಯರಿಗೆ, ಅಂಕವಿಕಲರಿಗೆ ಹಾಗೂ ವೃದ್ಧರಿಗೆ ಮಾಸಿಕ ₹ 2 ಸಾವಿರ ನೀಡಲಿದೆ’ ಎಂದರು.

ಜೊತೆಗೆ ಮಾಸಿಕ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಇದರ ಬಾಬ್ತು ಅಂದಾಜು ₹ 2 ಸಾವಿರ ಆಗಲಿದೆ. ಭತ್ತದ ಮೇಲಿನ ಕನಿಷ್ಠ ಬೆಂಬಲ ಬೆಲೆ ₹ 3 ಸಾವಿರಕ್ಕೆ ಏರಿಕೆ ಮಾಡಲಾಗುವುದು. ₹ 500ಕ್ಕೆ ಎಲ್‌ಪಿಜಿ ಸಿಲಿಂಡರ್‌ ಸಿಗಲಿದೆ ಎಂದು ಅವರು ಹೇಳಿದರು.

ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾಸಿಕ ಸುಮಾರು ₹ 16 ಸಾವಿರ ಬಡವರ ಖಾತೆಗೆ ವರ್ಗಾವಣೆ ಮಾಡಲಿದೆ. ಕೇಂದ್ರ ಹಾಗೂ ರಾಜ್ಯದ್ದು ಸೇರಿ ಬಡ ಕುಟುಂಬಗಳು ಮಾಸಿಕ ಕನಿಷ್ಠ ₹ 26 ಸಾವಿರ ಆರ್ಥಿಕ ನೆರವು ಪಡೆಯಲಿದೆ ಎಂದು ಅವರು ಹೇಳಿದರು.

ಇದ ಜೊತೆಗೆ, ಒಡಿಶಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಡವರು ವಾರ್ಷಿಕವಾಗಿ ₹25 ಲಕ್ಷದಷ್ಟು ಉಚಿತ ಆರೋಗ್ಯ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT