ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರದಲ್ಲಿ ಭಾಗವಹಿಸಿದರೆ ಶಿಸ್ತುಕ್ರಮ: ನೌಕರರಿಗೆ ಕೇಂದ್ರ ಎಚ್ಚರಿಕೆ

Last Updated 7 ಜನವರಿ 2020, 18:48 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿರುವ ಮುಷ್ಕರದಲ್ಲಿ ಸರ್ಕಾರಿ ಸ್ವಾಮ್ಯದ ಉದ್ಯಮಗಳು ಮತ್ತು ಇಲಾಖೆಗಳ ನೌಕರರು ಭಾಗವಹಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಈ ಸೂಚನೆಗಳನ್ನು ಹೊರಡಿಸಿದ್ದು, ಸಾಮೂಹಿಕ ಸಾಂದರ್ಭಿಕ ರಜೆ, ಧರಣಿ ಸೇರಿದಂತೆ ಯಾವುದೇ ರೀತಿಯ ಮುಷ್ಕರದಲ್ಲಿ ಭಾಗವಹಿಸುವುದನ್ನು ನಿಷೇಧಿಸಲಾಗಿದೆ.

‘ಪ್ರತಿಭಟನೆ ಸೇರಿದಂತೆ ಯಾವುದೇ ರೀತಿಯ ಮುಷ್ಕರದಲ್ಲಿ ನೌಕರರು ಭಾಗವಹಿಸಿದರೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ. ವೇತನ ಕಡಿತದ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಸುತ್ತೋಲೆಯಲ್ಲಿ
ತಿಳಿಸಲಾಗಿದೆ.

‘ಮುಷ್ಕರದ ದಿನದಂದು ಸಾಂದರ್ಭಿಕ ರಜೆ ಅಥವಾ ಇತರೆ ಯಾವುದೇ ರೀತಿಯ ರಜೆಯನ್ನು ನೌಕರರಿಗೆ ನೀಡಬಾರದು. ನೌಕರರ ಕೆಲಸಕ್ಕೂ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳದಂತೆ ಮನವೊಲಿಸುವ ಪ್ರಯತ್ನವನ್ನು ಮಾಡಬೇಕು’ ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT