ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತವಾಗಿ ₹2.80 ಕೋಟಿ ಸಾಗಣೆ: ಕೊರಿಯಾ ಪ್ರಜೆ ಬಂಧನ

Published 5 ಮೇ 2024, 12:18 IST
Last Updated 5 ಮೇ 2024, 12:18 IST
ಅಕ್ಷರ ಗಾತ್ರ

ನವದೆಹಲಿ: 2 ಲಕ್ಷ ಅಮೆರಿಕನ್‌ ಡಾಲರ್‌ (₹2.80 ಕೋಟಿ) ಹಣವನ್ನು ಅನಧಿಕೃತವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಕೊರಿಯಾದ ಪ್ರಜೆಯೊಬ್ಬರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಬ್ಯಾಂಕಾಕ್‌ಗೆ ಹೊರ‌ಟಿದ್ದ ಆರೋಪಿಯು ಭಾನುವಾರ ಟರ್ಮಿನಲ್‌ –3ರಲ್ಲಿ ಭದ್ರತಾ ತಪಾಸಣೆ ವೇಳೆ ಸಿಕ್ಕಿಬಿದ್ದಿ. ಬಳಿಕ ಆತನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಅಧಿಕಾರಿಗಳು  ಬಂಧಿಸಿದ್ದಾರೆ. 

ಇಷ್ಟು ದೊಡ್ಡ ಮೊತ್ತದ ಹಣವನ್ನು ಏತಕ್ಕೆ ಸಾಗಿಸಲಾಗುತ್ತಿದೆ ಎಂಬ ಬಗ್ಗೆ ಸರಿಯಾದ ಕಾರಣ ಅಥವಾ ದಾಖಲೆಯನ್ನು ಒದಗಿಸದ ಕಾರಣ ಪ್ರಯಾಣಿಕನನ್ನು ಮತ್ತು ಹಣವನ್ನು ಕಸ್ಟಮ್ಸ್‌ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT