ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು–ಕಾಶ್ಮೀರ: ಹಿರಿಯ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

Published 16 ಆಗಸ್ಟ್ 2024, 14:36 IST
Last Updated 16 ಆಗಸ್ಟ್ 2024, 14:36 IST
ಅಕ್ಷರ ಗಾತ್ರ

ಶ್ರೀನಗರ: ಮಹತ್ವದ ಬೆಳವಣಿಗೆಯಲ್ಲಿ, ಜಮ್ಮು–ಕಾಶ್ಮೀರದ ಪೊಲೀಸ್‌ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಚುನಾವಣೆ ಘೋಷಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ ಮಾಡಿರುವುದಕ್ಕೆ ರಾಜಕೀಯ ಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ.  

ಹಿರಿಯ ಐಪಿಎಸ್‌ ಅಧಿಕಾರಿ ನಳಿನ್‌ ಪ್ರಭಾತ್‌ ಅವರನ್ನು ವಿಶೇಷ ಡಿಜಿ ಆಗಿ ನೇಮಕ ಮಾಡಲಾಗಿದೆ. ಸದ್ಯ, ಆರ್‌.ಆರ್‌.ಸ್ವೇನ್‌ ಅವರು ಜಮ್ಮು–ಕಾಶ್ಮೀರ ಪೊಲೀಸ್‌ನ ಡಿಜಿ ಆಗಿದ್ದು, ಸೆ.30ರಂದು ನಿವೃತ್ತರಾಗಲಿದ್ದಾರೆ. ಬಳಿಕ, ಪ್ರಭಾತ್‌ ಅಧಿಕಾರ ಸ್ವೀಕರಿಸಲಿದ್ದಾರೆ.

ಸಿಐಡಿ ಎಡಿಜಿಪಿ ನಿತಿಶ್‌ ಕುಮಾರ್‌ ಅವರನ್ನು ಸಿಐಡಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸ್ವೇನ್‌ ಅವರಿಗೆ ಸಿಐಡಿಯ ಹೆಚ್ಚುವರಿ ಹೊಣೆ ನೀಡಲಾಗಿತ್ತು.

ರದ್ದತಿಗೆ ಮನವಿ: ಲೆಫ್ಟಿನೆಂಟ್‌ ಗವರ್ನರ್‌ ನೇತೃತ್ವದ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಪೊಲೀಸ್‌ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಿದೆ: ಎಂದು ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ದೂರಿದೆ.

ಈ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್‌ ಸಗರ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT