ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಟಿ ಭುವನೇಶ್ವರದಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭ

ಆನ್‌ಲೈನ್‌ ತರಗತಿಗಳಿಗೆ ಚಾಲನೆ
Last Updated 30 ಆಗಸ್ಟ್ 2020, 7:28 IST
ಅಕ್ಷರ ಗಾತ್ರ

ಭುವನೇಶ್ವರ: ಇಲ್ಲಿನ ಭಾರತೀಯ ತಾಂತ್ರಿಕ ಸಂಸ್ಥೆಯು (ಐಐಟಿ) ಆನ್‌ಲೈನ್‌ ತರಗತಿಗಳ ಮೂಲಕ ಹೊಸ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದೆ.

ಕೋವಿಡ್‌–19 ಪಿಡುಗಿನ ಕಾರಣ ಆನ್‌ಲೈನ್‌ ತರಗತಿಗಳಿಗೆ ಒತ್ತು ನೀಡಲಾಗಿದ್ದು, ಎಂ.ಟೆಕ್‌, ಎಂ.ಎಸ್ಸಿ, ಪಿಎಚ್‌.ಡಿ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳು ಆರಂಭಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕೋವಿಡ್‌ ಕಾರಣದಿಂದ ಮೂರು ವಾರಗಳು ತಡವಾಗಿ ತರಗತಿಗಳು ಆರಂಭವಾಗಿವೆ. ಸದ್ಯಕ್ಕೆ ಆನ್‌ಲೈನ್ ಮೂಲಕ ಪಾಠ ಪ್ರವಚನಗಳು ನಡೆಯಲಿವೆ. ಸ್ಥಿತಿಗತಿ ಸುಧಾರಣೆ ಆಗುತ್ತಿದ್ದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ವಿದ್ಯಾರ್ಥಿಗಳನ್ನು ಸಂಸ್ಥೆಯ ಆವರಣಕ್ಕೆ ಕರೆಸುವುದಾಗಿ ಸಂಸ್ಥೆ ಹೇಳಿದೆ.

‘ನಾವು ಈ ವರ್ಷ ಹೊಸ ಶೈಕ್ಷಣಿಕ ವರ್ಷವನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭಿಸಿದ್ದೇವೆ. ಆದರೆ 2020–21ನೇ ಸಾಲಿನ ಬಿ.ಟೆಕ್‌ ಕೋರ್ಸ್‌ನ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭಿಸುವ ಸವಾಲು ನಮ್ಮ ಮುಂದಿದೆ’ ಎಂದು ಸಂಸ್ಥೆಯ ನಿರ್ದೇಶಕ ಪ್ರೊ. ಆರ್.ವಿ. ರಾಜ ಕುಮಾರ್ ಪ್ರತಿಕ್ರಿಯಿಸಿದರು.

‘ಜೆಇಇ ಮೇನ್ಸ್‌ ಮತ್ತು ಜೆಇಇ ಅಡ್ವಾನ್ಸ್ಡ್‌ ಪರೀಕ್ಷೆಗಳು ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿವೆ. ಅದಾದ ಬಳಿಕ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಇಷ್ಟೆಲ್ಲ ಆಗಲು ಇನ್ನೂ ಒಂದೆರಡು ತಿಂಗಳು ಬೇಕಾಗಬಹುದು. ಆನಂತರವಷ್ಟೇ ಬಿ.ಟೆಕ್‌ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಲಿವೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT