ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IIT-Hyderabad: ವಿದ್ಯಾರ್ಥಿನಿ ಆತ್ಮಹತ್ಯೆ, ತಿಂಗಳಲ್ಲಿ ಎರಡನೇ ಪ್ರಕರಣ

Published 8 ಆಗಸ್ಟ್ 2023, 6:52 IST
Last Updated 8 ಆಗಸ್ಟ್ 2023, 6:52 IST
ಅಕ್ಷರ ಗಾತ್ರ

ಹೈದರಾಬಾದ್‌: ಒಡಿಶಾ ಮೂಲದ ವಿದ್ಯಾರ್ಥಿನಿಯೊಬ್ಬಳು ಸಂಗರೆಡ್ಡಿ ಜಿಲ್ಲೆಯ ಐಐಟಿ–ಹೈದರಾಬಾದ್‌ (IIT-Hyderabad) ಕ್ಯಾಂಪಸ್‌ನಲ್ಲಿನ ಹಾಸ್ಟೆಲ್‌ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೇ ತಿಂಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಐಐಟಿ–ಹೈದರಾಬಾದ್‌ನ ಎರಡನೇ ವಿದ್ಯಾರ್ಥಿನಿಯಾಗಿದ್ದಾಳೆ.

ಜುಲೈ 26 ರಂದು ದಾಖಲಾಗಿದ್ದ 21 ವರ್ಷದ ಎಮ್‌.ಟೆಕ್‌ ಮೊದಲ ವರ್ಷದ ವಿದ್ಯಾರ್ಥಿನಿಯಾದ ಅವರು ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಸಹಪಾಠಿಗಳು ತಿಳಿಸಿದ್ದಾರೆ.

ಮಧ್ಯಾಹ್ನ, ರಾತ್ರಿ ಎರಡೂ ಹೊತ್ತು ಊಟಕ್ಕೆ ಬರದ್ದನ್ನು ಗಮನಿಸಿ, ಆಕೆಯ ಕೊಠಡಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಐಐಟಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಂಗರೆಡ್ಡಿ ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಡೆತ್‌ ನೋಟ್‌ನಲ್ಲಿ ವಿದ್ಯಾರ್ಥಿನಿ ‘ಕುಟುಂಬದಲ್ಲಿ ಹಣಕಾಸಿನ ಸಮಸ್ಯೆಗಳಿವೆ’ ಎಂದು ಬರೆದಿದ್ದಾರೆ, ಅಲ್ಲದೆ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಹೇಳಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಜುಲೈ2 ರಂದು ಬಿ.ಟೆಕ್‌ ಎರಡನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT