ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ರಾಸ್‌ ಐಐಟಿಗೆ ಹಳೆಯ ವಿದ್ಯಾರ್ಥಿಗಳು, ಕೈಗಾರಿಕೆಗಳಿಂದ ₹513 ಕೋಟಿ ದೇಣಿಗೆ

Published 8 ಮೇ 2024, 14:19 IST
Last Updated 8 ಮೇ 2024, 14:19 IST
ಅಕ್ಷರ ಗಾತ್ರ

ನವದೆಹಲಿ: ಮದ್ರಾಸ್‌ ಐಐಟಿ 2023–24ನೇ ಸಾಲಿನಲ್ಲಿ ಹಳೆಯ ವಿದ್ಯಾರ್ಥಿಗಳು, ಕೈಗಾರಿಕೆಗಳು ಮತ್ತು ದಾನಿಗಳಿಂದ  ₹513 ಕೋಟಿ ದೇಣಿಗೆ ಪಡೆದಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

ಜೊತೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಕೈಗಾರಿಕೋದ್ಯಮಿಗಳು ಇನ್ನೂ ₹717 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದೂ ತಿಳಿಸಿದ್ದಾರೆ.

ಸತತ ಎರಡನೇ ಬಾರಿಗೆ ಐಐಟಿಯು ಆರ್ಥಿಕ ವರ್ಷವೊಂದರಲ್ಲಿ ದಾಖಲೆಯ ದೇಣಿಗೆ ಪಡೆದಿದೆ.

2022–23ನೇ ಸಾಲಿನಲ್ಲಿ ಐಐಟಿಯು ₹218 ಕೋಟಿ ದೇಣಿಗೆ ಸ್ವೀಕರಿಸಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ 135ರಷ್ಟು ಹೆಚ್ಚು ದೇಣಿಗೆ ಪಡೆದಿದೆ.

ಸ್ವೀಕರಿಸಿದ ದೇಣಿಗೆಯನ್ನು ತಾಂತ್ರಿಕ ಸಂಶೋಧನೆ ಮತ್ತು ಅಭಿವೃದ್ಧಿಗೆ ಬಳಸಲಾಗುತ್ತಿದೆ. ಹಾಗೆಯೇ ಅರ್ಹ ವಿದ್ಯಾರ್ಥಿಗಳನ್ನು ಬೆಂಬಲಿಸಲು, ಅವರಿಗೆ ವಿದ್ಯಾರ್ಥಿವೇತನ ನೀಡಲು ಬಳಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT