ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IIT Madras: ಮಹಾರಾಷ್ಟ್ರ ವಿದ್ಯಾರ್ಥಿ ಆತ್ಮಹತ್ಯೆ, ರಾಜ್ಯದ ವಿದ್ಯಾರ್ಥಿ ಅಸ್ವಸ್ಥ

Last Updated 14 ಫೆಬ್ರುವರಿ 2023, 11:29 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಐಐಟಿ– ಮದ್ರಾಸ್‌ನಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್‌ ಪದವಿ (ಎಂ.ಎಸ್‌– ಎಲೆಕ್ಟ್ರಿಕಲ್‌) ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ 22 ವರ್ಷದ ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇದೇ ಐಐಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಕೆಲವು ಮಾತ್ರೆಗಳನ್ನು ಸೇವಿಸಿ ಜೀವಕ್ಕೆ ಅಪಾಯ ತಂದುಕೊಂಡಿರುವ ಘಟನೆಯೂ ನಡೆದಿದೆ. ಈ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

‘ಮಹಾರಾಷ್ಟ್ರ ಮೂಲದ ವಿದ್ಯಾರ್ಥಿ ಗೈರಾಗಿದ್ದನ್ನು ಗಮನಿಸಿದ ಸಹಪಾಠಿಯೊಬ್ಬರು ಈ ಕುರಿತು ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ಕೊಠಡಿಯ ಬಾಗಿಲು ತೆರೆದು ನೋಡಿದಾಗ, ವಿದ್ಯಾರ್ಥಿಯ ಶವ ನೇಣುಬಿಗಿದ ಸ್ಥಿತಿಯಲ್ಲಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕೊಟ್ಟುಪುರಂನ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಐಐಟಿ– ಮದ್ರಾಸ್‌ನಿಂದ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT