ವಿಪಕ್ಷಗಳ ಆಕ್ಷೇಪ:
ಎಸ್ಐಆರ್‌ಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತ ಪಡಿಸಿವೆ.ಚುನಾವಣಾ ಆಯೋಗ ನಡೆಸುತ್ತಿರುವ ಪರಿಶೀಲನೆಯಿಂದ ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕು ಕಸಿದಂತಾಗುತ್ತದೆ. ಯಾವುದೇ ವ್ಯಕ್ತಿಯ ಪೌರತ್ವವನ್ನು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಕಾನೂನು ಬದ್ಧವಾದ ಅಧಿಕಾರವಿಲ್ಲ. ಅಲ್ಲದೇ, ಸ್ಥಳೀಯ ಅಧಿಕಾರಿಗಳಿಗೆ ಅನಗತ್ಯವಾಗಿ ಹೆಚ್ಚುವರಿ ಅಧಿಕಾರ ನೀಡಲಾಗಿದ್ದು, ಅದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆಗಳಿದೆ ಎಂದು ಆರೋಪಿಸಿವೆ.