ಗುರುಗ್ರಾಮ/ಚಂಡೀಗಢ: ಹರಿಯಾಣದ ನೂಹ್ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಸದ್ಯ ಪರಿಸ್ಥಿತಿ ತಿಳಿಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಗೃಹರಕ್ಷಕ ದಳದ ಇಬ್ಬರು ಸಿಬ್ಬಂದಿ ಹಾಗೂ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಡಿಎಸ್ಪಿ ಸೇರಿದಂತೆ ಹಲವು ಪೊಲೀಸರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುಗ್ರಾದಲ್ಲಿ ಸೆಕ್ಟರ್ 57ರಲ್ಲಿರುವ ಮಸೀದಿ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಇಮಾಮ್ ಎಂಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಮಾಮ್ ಬಿಹಾರ ರಾಜ್ಯದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ 120ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆ. ಇವುಗಳಲ್ಲಿ ಪೊಲೀಸರು ವಾಹನಗಳು ಸೇರಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಟರ್ನೆಟ್ ನಿರ್ಬಂಧ, ಶಾಲಾ– ಕಾಲೇಜುಗಳಿಗೆ ರಜೆ

ಉದ್ವಿಗ್ನ ಪರಿಸ್ಥಿತಿ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಫರಿದಾಬಾದ್ ಜಿಲ್ಲೆಯಲ್ಲಿ ಇಂದು ಶಾಲಾ– ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಭಾಗದಲ್ಲಿ ಉದ್ವಿಗ್ನ ವಾತಾವರಣ ಶಮನ ಮಾಡಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.

ಏನಿದು ಘಟನೆ

ವಿಶ್ವ ಹಿಂದೂ ಪರಿಷತ್ನ ‘ಬ್ರಿಜ್ ಮಂಡಲ್ ಜಲಾಭಿಷೇಕ್ ಯಾತ್ರೆ'ಯನ್ನು ನೂಹ್ನ ಖೇಡ್ಲಾ ಮೋಡ್ ಬಳಿ ಯುವಕರ ಗುಂಪು ತಡೆದು, ಕಲ್ಲು ತೂರಾಟ ನಡೆಸಿತು. ನಾಲ್ಕು ಕಾರುಗಳಿಗೆ ಬೆಂಕಿ ಹಚ್ಚಲಾಯಿತು. ಯಾತ್ರೆ ತಡೆದ ಯುವಕರ ಗುಂಪಿನ ಮೇಲೆ ಜನರು ಪ್ರತಿಯಾಗಿ ಕಲ್ಲುಗಳನ್ನು ತೂರಿದ ಪರಿಣಾಮ ಘರ್ಷಣೆ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.