ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ: ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Published 22 ಜೂನ್ 2024, 14:51 IST
Last Updated 22 ಜೂನ್ 2024, 14:51 IST
ಅಕ್ಷರ ಗಾತ್ರ

ತಿರುವನಂತಪುರ(ಪಿಟಿಐ): ಕೇರಳದ ಕೆಲ ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಭಾನುವಾರ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಹಾಗೂ ಕಣ್ಣೂರು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಇಡುಕ್ಕಿ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್ ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಇತರ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಎರಡು ದಿನಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.

‘ರೆಡ್‌ ಅಲರ್ಟ್‌’ ಎಂಬುದು 24 ಗಂಟೆಗಳ ಅವಧಿಯಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವುದನ್ನು ಸೂಚಿಸುತ್ತದೆ. ‘ಆರೆಂಜ್‌ ಅಲರ್ಟ್‌’, 11ರಿಂದ 20 ಸೆಂ.ಮೀ, ಹಾಗೂ ‘ಯೆಲ್ಲೊ ಅಲರ್ಟ್’ 6ರಿಂದ 11 ಸೆಂ.ಮೀ.ನಷ್ಟು ಮಳೆ ಬೀಳುವ ಮುನ್ಸೂಚನೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT