ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ದಿನಗಳಲ್ಲಿ ಆಂಧ್ರಪ್ರದೇಶದಲ್ಲಿ ಮಳೆ ನಿರೀಕ್ಷೆ

Published 23 ಮೇ 2024, 13:58 IST
Last Updated 23 ಮೇ 2024, 13:58 IST
ಅಕ್ಷರ ಗಾತ್ರ

ಅಮರಾವತಿ: ‘ಮುಂದಿನ ಐದು ದಿನಗಳಲ್ಲಿ (ಮೇ 23ರಿಂದ 27) ಆಂಧ್ರ ಪ್ರದೇಶದ ಹಲವು ಭಾಗಗಳಲ್ಲಿ ಮಳೆ ಸುರಿಯಲಿದೆ. ಜೊತೆಗೆ, ಗುಡುಗು–ಮಿಂಚು, ವೇಗದ ಗಾಳಿಯೂ ಬರುವ ನಿರೀಕ್ಷೆ ಇದೆ’ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

‘ರಾಜ್ಯದ ಉತ್ತರ ಕರಾವಳಿ, ಯಾನಮ್‌, ದಕ್ಷಿಣ ಕರಾವಳಿ ಮತ್ತು ರಾಯಲಸೀಮಾ ಭಾಗಗಳಲ್ಲಿ ಮಳೆ ಬೀಳಲಿದೆ. ಇದೇ ವೇಳೆ ರಾಜ್ಯದ ಉತ್ತರ ಕರಾವಳಿ ಭಾಗದಲ್ಲಿ ಶುಕ್ರವಾರ ಅಧಿಕ ಮಳೆಯಾಗಲಿದೆ. ಗಾಳಿಯು ಗಂಟೆಗೆ 50 ಕಿ.ಮೀ ವೇಗದಲ್ಲಿ ಬೀಸುವ ನಿರೀಕ್ಷೆ ಇದೆ’ ಎಂದು ಇಲಾಖೆ ಹೇಳಿದೆ.

‘ನಿರೀಕ್ಷೆಗೂ ಮುನ್ನವೇ ಬಂಗಾಳ ಕೊಲ್ಲಿಯ ದಕ್ಷಿಣ ಭಾಗಕ್ಕೆ ನೈರುತ್ಯ ಮುಂಗಾರು ಬರಲಿದೆ. ಮುಂದಿನ ಎರಡು ದಿನಗಳಲ್ಲಿ ಅಂಡಮಾನ್‌ ನಿಕೋಬಾರ್‌ ದ್ವೀಪದ ಕೆಲವು ಭಾಗಗಳಲ್ಲಿ, ಬಂಗಾಳ ಕೊಲ್ಲಿಯ ಕೇಂದ್ರ ಭಾಗದ ಪೂರ್ವಕ್ಕೆ ಇನ್ನೆರಡು ದಿನಗಳಲ್ಲಿ ಮುಂಗಾರು ಬರಲಿದೆ’ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT