ನವದೆಹಲಿ: ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಕೊರೊನಾ ವೈರಸ್ ರೂಪಾಂತರಿ ಸೋಂಕು ದೇಶದಲ್ಲಿ ಮತ್ತೆ 13 ಮಂದಿಯಲ್ಲಿ ದೃಢಪಟ್ಟಿದೆ.

ಇದರೊಂದಿಗೆ ದೇಶದಲ್ಲಿ ಬ್ರಿಟನ್ ರೂಪಾಂತರಿ ಕೋವಿಡ್-19 ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ.

ಬ್ರಿಟನ್‌ನಲ್ಲಿ ಮೊದಲ ಬಾರಿಗೆ ವರದಿಯಾಗಿರುವ ಹೊಸ ರೂಪಾಂತರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ 71ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಎಲ್ಲ ಸೋಂಕಿತರವನ್ನು ಆಯಾ ರಾಜ್ಯ ಸರ್ಕಾರಗಳು ಏರ್ಪಡಿಸಿದ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ.

ಇವರೊಂದಿಗೆ ನಿಕಟ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಸಹ ಯಾತ್ರಿಕರು, ಕುಟುಂಬ ಸೇರಿದಂತೆ ಸಂಪರ್ಕದಲ್ಲಿದ್ದವರ ಸಮಗ್ರ ಪತ್ತೆ ಹಚ್ಚುವಿಕೆಯನ್ನು ಆರಂಭಿಸಲಾಗಿದೆ.

ಇದನ್ನೂ ಓದಿ:30 ಕೋಟಿ ಜನರಿಗೆ ಕೋವಿಡ್-19 ಲಸಿಕೆ ವಿತರಿಸಲು ದೇಶ ಸಿದ್ಧ

ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕಣ್ಗಾವಲು, ನಿಯಂತ್ರಣ, ಆರೋಗ್ಯ ತಪಾಸಣೆ ಮತ್ತು ಲ್ಯಾಬ್‌ಗಳಿಗೆ ಸ್ಯಾಂಪಲ್‌ಗಳ ರವಾನೆಗೆ ಸಂಬಂಧಿಸಿದಂತೆ ಸೂಚನೆಗಳನ್ನು ರವಾನಿಸಲಾಗಿದೆ ಎಂದು ತಿಳಿಸಿದೆ.

ಕೊರೊನಾ ವೈರಸ್ ಹೊಸ ರೂಪಾಂತರವನ್ನು ಬ್ರಿಟನ್ ಹೊರತಾಗಿ ಈಗಾಗಲೇ ಡೆನ್ಮಾರ್ಕ್, ಹಾಲೆಂಡ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಜರ್ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್, ಸಿಂಗಾಪುರ ಸೇರಿದಂತೆ ಹಲವಾರುರಾಷ್ಟ್ರಗಳಲ್ಲಿ ಪತ್ತೆ ಹಚ್ಚಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.