ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್‌ ಭಾರತ ಭೇಟಿ ಇಂದು

Published 24 ಜನವರಿ 2024, 20:05 IST
Last Updated 24 ಜನವರಿ 2024, 20:05 IST
ಅಕ್ಷರ ಗಾತ್ರ

ನವದೆಹಲಿ: ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್‌ ಅವರು ಗುರುವಾರದಿಂದ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮೊದಲಿಗೆ ಅವರು ಜೈಪುರದ ಅಂಬರ್‌ ಕೋಟೆ, ಹವಾ ಮಹಲ್ ಮತ್ತು ಜಂತರ್‌ ಮಂತರ್‌ನ ಖಗೋಳ ವೀಕ್ಷಣಾಲಯಕ್ಕೆ ಭೇಟಿ ನೀಡಲಿದ್ದಾರೆ.

ಜ.26ರಂದು ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮ್ಯಾಕ್ರಾನ್‌ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಪ್ರತಿಷ್ಠಿತ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಫ್ರಾನ್ಸ್‌ನ ಆರನೇ ನಾಯಕ ಎನಿಸಿಕೊಳ್ಳಲಿದ್ದಾರೆ.

ಮ್ಯಾಕ್ರಾನ್‌ ಅವರು ಆರು ತಾಸು ಜೈಪುರದಲ್ಲಿ ಕಾಲ ಕಳೆಯಲಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಉಭಯ ದೇಶಗಳ ನಾಯಕರು ಐಷಾರಾಮಿ ಹೋಟೆಲ್‌ ತಾಜ್‌ ರಾಮಬಾಗ್‌ ಪ್ಯಾಲೇಸ್‌ನಲ್ಲಿ ದ್ವಿಪಕ್ಷೀಯ ಒಪ್ಪಂದ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 5.30ಕ್ಕೆ ಮ್ಯಾಕ್ರಾನ್‌ ಅವರನ್ನು ಸ್ವಾಗತಿಸಲಿದ್ದಾರೆ. ನಂತರ ಉಭಯ ದೇಶಗಳ ನಾಯಕರು ನಗರದಲ್ಲಿರುವ ಐತಿಹಾಸಿಕ, ಸಾಂಸ್ಕೃತಿಕ ಪ್ರಾಮುಖ್ಯತೆ ಪಡೆದಿರುವ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ’ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಹೇಳಿಕೆಯಲ್ಲಿ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಮ್ಯಾಕ್ರಾನ್‌ ಅವರ ವಿಶೇಷ ವಿಮಾನವು ಮಧ್ಯಾಹ್ನ 2.30ಕ್ಕೆ ಜೈಪುರಕ್ಕೆ ಬಂದಿಳಿಯಲಿದೆ. ರಾತ್ರಿ 8.30ರ ಸುಮಾರಿಗೆ ದೆಹಲಿಗೆ ತೆರಳಲಿದೆ.

ಮ್ಯಾಕ್ರಾನ್‌ ಅವರು ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT