ಗ್ಯಾಂಕ್ಟಕ್ : ದೇಶದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಪ್ರವಾಹದ ಪರಿಸ್ಥಿತಿ ತಲೆದೋರಿದೆ. ಹಲವು ಕಡೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ನೆಚ್ಚರಿಕೆ ನೀಡಿದೆ.

ಕಳೆದ ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಿಕ್ಕಿಂನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಸುಮಾರು 200 ಪ್ರವಾಸಿಗರು ಸಂಕಷ್ಟದಲ್ಲಿ ಸಿಲುಕಿದ್ದಾರೆ.ಹಲವೆಡೆ ಸಂಭವಿಸಿದ ಭೂಕುಸಿತದ ಕಾರಣ ರಾಜಧಾನಿಗ್ಯಾಂಕ್ಟಕ್ ಮತ್ತು ಇತರ ನಗರಗಳಲ್ಲಿ ನೀರಿನ ಕೊಳವೆಗಳಿಗೆ ಹಾನಿಯಾಗಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಗ್ಯಾಂಗ್ಟಕ್ ಮೂಲಕ ಭಾರತ– ಬಾಂಗ್ಲಾದೇಶ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗಿದೆಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಂನಲ್ಲಿ ಶನಿವಾರದ ಮಳೆ ಮುಂದುವರಿಯಲಿದ್ದು, ಭಾರಿ ಇಂದ ಅತ್ಯಧಿಕ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಮುಂದುವರೆದ ಪ್ರವಾಹ ಪರಿಸ್ಥಿತಿ

ಗುವಾಹಟಿ: ಅಸ್ಸಾಂನ ವಿವಿಧ ರಾಜ್ಯಗಳಲ್ಲಿ ಮಳೆ ಮಂದುವರಿದಿದ್ದು ಗಂಭೀರ ಪ್ರವಾಹ ಪರಿಸ್ಥಿತಿಯು ಬುಧವಾರವೂ ಮುಂದುವರಿದಿದೆ. ಸುಮಾರು 40 ಸಾವಿರ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅವರಲ್ಲಿ ಬಹುತೇಕರಿಗೆಪರಿಹಾರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಲ್ಲಿ ಶನಿವಾರದ ವರೆಗೆ ಮಳೆ ಮುಂದುವರೆಯಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.

ತಗ್ಗು ಪ್ರದೇಶಗಳಿಗೆ ಕಟ್ಟೆಚ್ಚರಿಕೆ

ಇಟಾನಗರ: ಅರುಣಾಚಲ ಪ್ರದೇಶದಲ್ಲೂ ಮಳೆ ಮುಂದುವರಿದಿದ್ದು, ಸಿಯಾಂಗ್ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತದೆ. ಪೂರ್ವ ಸಿಯಾಂಗ್ ಜಿಲ್ಲೆಯ ತಗ್ಗು ಪ್ರದೇಶಗಳಿಗೆ ಕಟ್ಟೆಚ್ಚರಿಕೆ ನೀಡಲಾಗಿದೆ.

ಜಲ ಸಂಪನ್ಮೂಲ ಮತ್ತು ವಿಪತ್ತು ನಿರ್ವಹಣಾ ಇಲಾಖೆಗಳು ಪರಿಸ್ಥಿತಿಯನ್ನು ವೀಕ್ಷಿಸುತ್ತಿವೆ. ಆದ್ದರಿಂದ ಆತಂಕಕ್ಕೀಡಾಗುವ ಅಗತ್ಯವಿಲ್ಲ ಎಂದು ಜನರಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆ

ಕೊಯಮತ್ತೂರು: ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಅಣೆಕಟ್ಟೆಯ ಸ್ಟ್ಯಾನ್ಲಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು ಜಲಾಶಯದ ನೀರಿನ ಮಟ್ಟ 120 ಅಡಿ ಮುಟ್ಟಿದೆ. ಹಾಗಾಗಿ, ತಮಿಳುನಾಡಿನ ನದಿ ಮುಖಜ ಭೂಮಿಯಲ್ಲಿರುವ ಜಿಲ್ಲೆಗಳಿಗೆ ಪ್ರವಾಹದ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾವೇರಿ ನದಿ ತೀರದಲ್ಲಿ ಮತ್ತು ನದಿ ಮುಖಜ ಭೂಮಿಗಳ ಬಳಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.