ಕೋಲ್ಕತ್ತ (ಪಿಟಿಐ): ಕೋಲ್ಕತ್ತದ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬರುವ ಬಾಂಗ್ಲಾದೇಶೀಯರ ಸಂಖ್ಯೆಯು ಬಿಕ್ಕಟ್ಟಿನ ಪರಿಣಾಮವಾಗಿ ಭಾರಿ ಪ್ರಮಾಣದಲ್ಲಿ ಕಡಿಮೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ನಂತರದಲ್ಲಿ ರೋಗಿಗಳು ಚಿಕಿತ್ಸೆಗೆ ಬರುವ ಪ್ರಮಾಣವು ಕಡಿಮೆ ಆಗಿದೆ ಎಂದು ಅವರು ಹೇಳಿದ್ದಾರೆ. ಮಣಿಪಾಲ್ ಆಸ್ಪತ್ರೆ, ಫೊರ್ಟಿಸ್ ಹೆಲ್ತ್‌ಕೇರ್, ಅಪೋಲೊ ಆಸ್ಪತ್ರೆಗಳು ತಮ್ಮಲ್ಲಿಗೆ ಬರುವ ಬಾಂಗ್ಲಾ ರೋಗಿಗಳ ಸಂಖ್ಯೆ ಕಡಿಮೆ ಆಗಿದೆ ಎಂದು ತಿಳಿಸಿವೆ.