ಶ್ರೀನಗರ: ಪಾಕಿಸ್ತಾನ ಸಶಸ್ತ್ರ ಪಡೆಗಳು ಗಡಿ ಪ್ರದೇಶದಲ್ಲಿರುವ ಶಾಲೆಗಳು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂಬುದನ್ನು ಚೆನ್ನಾಗಿ ಬಲ್ಲ ಪಾಕಿಸ್ತಾನ ಸೇನೆಯು ತನ್ನ ವಾಯು ಪ್ರದೇಶವನ್ನೇ ಗುರಾಣಿಯನ್ನಾಗಿ ಬಳಸಿಕೊಂಡಿತ್ತು. ನಾಗರಿಕ ವಿಮಾನಗಳಿಗೆ ಅಂತರರಾಷ್ಟ್ರೀಯ ಗಡಿ ಸಮೀಪ ಹಾರಾಟ ನಡೆಸಲು ಅನುಮತಿ ನೀಡುವ ಮೂಲಕ ಬೇಜವಾಬ್ದಾರಿ ವರ್ತನೆ ಪ್ರದರ್ಶಿಸಿತ್ತು.

ಇದೀಗ, ಶ್ರೀನಗರ, ಅವಂತಿಪುರ ಮತ್ತು ಉಧಂಪುರ ವಾಯುನೆಲೆಗಳಲ್ಲಿ ಇರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ ಎಂದು ಸೇನೆ ಮಾಹಿತಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.

ಇದೀಗ ಪಾಕ್ ಸೇನಯು ಗಡಿಯಲ್ಲಿ ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್ ಹಾಗೂ ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಪಾಕ್ ದಾಳಿಯನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.
.ಭಾರತದತ್ತ ಪಾಕಿಸ್ತಾನ ಹಾರಿಸಿದ 300–400 ಡ್ರೋನ್ಗಳನ್ನು ಹೊಡೆದುರುಳಿಸಿದ ಸೇನೆ.Ind-Pak Tensions | ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ.ಭಯೋತ್ಪಾದನೆ ವಿರುದ್ಧ ಜಗತ್ತು ಸ್ವಲ್ಪವೂ ಸಹಿಷ್ಣು ಆಗಬೇಕಿಲ್ಲ: ಎಸ್.ಜೈಶಂಕರ್.ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್ಪ್ಯಾಡ್ ಧ್ವಂಸಗೊಳಿಸಿದ ಭಾರತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.