ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಿ 50 ನರ್ಸ್‌ಗಳಿಗೆ ಆಹ್ವಾನ: ಸರ್ಕಾರ

Published 14 ಆಗಸ್ಟ್ 2023, 15:38 IST
Last Updated 14 ಆಗಸ್ಟ್ 2023, 15:38 IST
ಅಕ್ಷರ ಗಾತ್ರ

ನವದೆಹಲಿ: ಆಗಸ್ಟ್‌15ರ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಿ 50 ದಾದಿಯರು(ನರ್ಸ್‌) ಹಾಗೂ ಅವರ ಕುಟುಂಬವನ್ನು ಕೆಂಪುಕೋಟೆ ಬಳಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಕೋವಿಡ್‌ ಸಂದರ್ಭದಲ್ಲಿನ ಅವರ ಸೇವಾ ಮನೋಭಾವನೆಯನ್ನು ಗೌರವಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾದಿಯರು, ರೈತರು, ಮೀನುಗಾರರು ಸೇರಿದಂತೆ ದೇಶದ ವಿವಿಧ ಕ್ಷೇತ್ರಗಳಿಂದ ಸುಮಾರು 1,800 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ.

ರೈತ ಉತ್ಪಾದಕ ಸಂಸ್ಥೆಗಳ ಸದಸ್ಯರು , ಗ್ರಾಮ ಪಂಚಾಯಿತಿ ಸದಸ್ಯರು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ, ಕೇಂದ್ರ ವಿಸ್ತಾ ಯೋಜನೆಯ ಫಲಾನುಭಾವಿಗಳು ಸೇರಿದಂತೆ ಶ್ರಮ ಯೋಗಿಗಳು ( ಕಾರ್ಮಿಕರು) ಸೇರಿದಂತೆ ವಿವಿಧ ಕ್ಷೇತ್ರಗಳಿಂದ 1800 ವಿಶೇಷ ಅಥಿತಿಗಳನ್ನು ಆಹ್ವಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ.

ಕೋವಿಡ್‌ ಸಮಯದಲ್ಲಿ ನಮ್ಮ(ನರ್ಸ್) ಕೆಲಸವನ್ನು ಗುರುತಿಸಿ, ಸ್ವತಂತ್ರ ದಿನದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಆಹ್ವಾನಿಸಿರುವ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸುವೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ನರ್ಸ್‌ ಅನಿತಾ ಥೋಮರ್‌ ಹೇಳಿದ್ದಾರೆ.

ಮತ್ತೊಬ್ಬ ನರ್ಸ್ ವಂದನಾ ಕೌಶಿಕ್‌ ಮಾತನಾಡಿ, ಕೋವಿಡ್‌ ಸಮಯದಲ್ಲಿನ ನಮ್ಮ(ನರ್ಸ್) ಶ್ರಮ ಮತ್ತು ಸೇವಾ ಮನೋಭಾವವನ್ನು ಗುರುತಿಸಿದ್ದಕ್ಕಾಗಿ ಹಾಗೂ ದಾದಿಯರ ಪರವಾದ ಯೋಜನೆಗಳನ್ನು ಜಾರಿ ಮಾಡಿರುವ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT